ವಿಂಡೀಸ್ ಸರಣಿಯೂ ಕೈವಶ; ಭಾರತದ ಅತ್ಯಂತ ಯಶಸ್ವೀ ಟೆಸ್ಟ್ ನಾಯಕ ಎನಿಸಿಕೊಂಡ ಕೊಹ್ಲಿ!

ವೆಸ್ಟ್‌ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದ್ದು, ಈ ಜಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

Published: 03rd September 2019 08:42 AM  |   Last Updated: 03rd September 2019 08:42 AM   |  A+A-


Virat Kohli

ವಿರಾಟ್ ಕೊಹ್ಲಿ

Posted By : Srinivasamurthy VN
Source : Online Desk

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನ

ಜಮೈಕಾ: ವೆಸ್ಟ್‌ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದ್ದು, ಈ ಜಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದು, ಆ ಮೂಲಕ ಈ ಹಿಂದಿನ ನಾಯಕರಾದ ಎಂಎಸ್ ಧೋನಿ, ಸೌರವ್ ಗಂಗೂಲಿ ಅವರ ದಾಖಲೆಗಳನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಕೊಹ್ಲಿ ಇದುವರೆಗೆ ಒಟ್ಟು 48 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, ಈ ಪೈಕಿ 28 ಗೆಲುವು ತಂದುಕೊಟ್ಟಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಹೆಸರಿನಲ್ಲಿತ್ತು. ಧೋನಿ ನಾಯಕತ್ವದಲ್ಲಿ ಭಾರತ ಒಟ್ಟು 27 ಪಂದ್ಯಗಳಲ್ಲಿ ಜಯ ದಾಖಲಿಸಿತ್ತು.

ನಿನ್ನೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲಿ ಭಾರತ ತಂಡ 257 ರನ್ ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಜಯದೊಂದಿಗೆ ಕೊಹ್ಲಿ 2-0ಅತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ಪೀಪ್ ಮಾಡಿತು.

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp