ಕಳಪೆ ಪ್ರದರ್ಶನ:ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆಎಲ್ ರಾಹುಲ್ ಔಟ್, ಗಿಲ್ ಇನ್

ಅಕ್ಟೋಬರ್ 2 ರಿಂದ ಸ್ವದೇಶದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ 15 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಬಿಸಿಸಿಐ ಇಂದು ಪ್ರಕಟಿಸಿದೆ.
ಟೀಂ ಇಂಡಿಯಾ ಆಟಗಾರರು
ಟೀಂ ಇಂಡಿಯಾ ಆಟಗಾರರು

ನವ ದೆಹಲಿ: ಅಕ್ಟೋಬರ್ 2 ರಿಂದ ಸ್ವದೇಶದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ 15 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಬಿಸಿಸಿಐ ಇಂದು ಪ್ರಕಟಿಸಿದೆ.

 ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸದಲ್ಲಿ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಆರಂಭಿಕ ಆಟಗಾರ ಕನ್ನಡಿಗ ಕೆ. ಎಲ್. ರಾಹುಲ್ ಅವರನ್ನು ಕೈ ಬಿಡಲಾಗಿದೆ. ರೋಹಿತ್ ಶರ್ಮಾ ಹಾಗೂ ಮಾಯಾಂಕ್ ಅಗರ್ ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕೆಎಲ್ ರಾಹುಲ್ ಬದಲಿಗೆ 20 ವರ್ಷದ ಶುಬ್ ಮನ್ ಗಿಲ್ ಅವರಿಗೆ ಅವಕಾಶ ನೀಡಲಾಗಿದೆ. ವೇಗಿ ಉಮೇಶ್ ಯಾದವ್ ಅವರನ್ನು ಕೂಡಾ ಕೈ ಬಿಡಲಾಗಿದ್ದು, ಅವರ ಸ್ಥಾನಕ್ಕೆ ಕುಲದೀಪ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. 

ಕಳಪೆ ಫಾರ್ಮ್ ಹಿನ್ನೆಲೆಯಲ್ಲಿ ಕೆ ಎಲ್ ರಾಹುಲ್ ಅವರನ್ನು ಕೈ ಬಿಡಲಾಗಿದೆ. ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತಿಳಿಸಿದ್ದಾರೆ.

ಅಕ್ಟೋಬರ್  2 ರಂದು ವಿಶಾಖಪಟ್ಟಣಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅಕ್ಟೋಬರ್ 10 ರಿಂದ 14ರವರೆಗೂ ಪುಣೆಯಲ್ಲಿ  ಎರಡನೇ ಪಂದ್ಯ ಹಾಗೂ ಅಕ್ಟೋಬರ್ 19ರಿಂದ 23ರವರೆಗೂ ರಾಂಚಿಯಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. 

ಟೀ ಇಂಡಿಯಾ ಇಂತಿದೆ: ವಿರಾಟ್ ಕೊಹ್ಲಿ ( ನಾಯಕ) ಮಾಯಾಂಕ್ ಅಗರ್ ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಂಜಿಕ್ಯಾ ರಹಾನೆ ( ಉಪನಾಯಕ) ಹನುಮ ವಿಹಾರಿ, ರಿಷಭ್ ಪಂತ್ ( ವಿಕೆಟ್ ಕೀಪರ್ ) ವೃದ್ಧಿಮನ್ ಶಾ ( ವಿಕೆಟ್ ಕೀಪರ್ )  ಆರ್. ಅಶ್ವಿನ್, ರವೀಂದ್ರ ಜಡೇಜಾ. ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಇಶಾಂತ್ ಶರ್ಮಾ, ಶುಭಮನ್ ಗಿಲ್ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com