ಮಾಜಿ ಕ್ರಿಕೆಟರ್  ಮಾಧವ್ ಆಪ್ಟೆ ನಿಧನ

ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಮಾಧವ್ ಆಪ್ಟೆ  ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಮಾಧವ್ ಆಪ್ಟೆ
ಮಾಧವ್ ಆಪ್ಟೆ

ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಮಾಧವ್ ಆಪ್ಟೆ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಧವ್ ಆಪ್ಟೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

 ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6-09ರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ವಾಮನ್ ಆಪ್ಟೆ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮಾಧವ್ ಆಪ್ಟೆ 7 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು.  ಒಂದು ಶತಕ, ಮೂರು ಅರ್ಧಶತಕದೊಂದಿಗೆ 542 ರನ್ ಗಳನ್ನು  ಹೊಂದಿದ್ದಾರೆ.  ಅಜೇಯ 163 ರನ್ ಅವರ ಅಧಿಕ ಸ್ಕೋರು ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com