ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ, ಟೀಂ ಇಂಡಿಯಾ ಪ್ರಕಟ, ಸ್ಟಾರ್ ಬೌಲರ್ ಬುಮ್ರಾಗೆ ಗೇಟ್ ಪಾಸ್!

ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ ಪ್ರೀತ್ ಬುಮ್ರಾಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಗೇಟ್ ಪಾಸ್ ನೀಡಲಾಗಿದೆ.
ಜಸ್ ಪ್ರೀತ್ ಬುಮ್ರಾ
ಜಸ್ ಪ್ರೀತ್ ಬುಮ್ರಾ

ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ ಪ್ರೀತ್ ಬುಮ್ರಾಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಗೇಟ್ ಪಾಸ್ ನೀಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗಾಂಧಿ-ಮಂಡೆಲಾ ಟ್ರೋಫಿ ನಡೆಯಲಿದ್ದು ಸದ್ಯ ಸಣ್ಣಪುಟ್ಟ ಗಾಯಗಳ ಸಮಸ್ಯೆ ಎದುರಿಸುತ್ತಿರುವ ಬುಮ್ರಾರನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೊರಗಿಟ್ಟಿದೆ. ಇನ್ನು ಬುಮ್ರಾರ ಬದಲಿಗೆ ಉಮೇಶ್ ಯಾದವ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

3 ಟೆಸ್ಟ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ
ವಿರಾಟ್ ಕೊಹ್ಲಿ ನಾಯಕ, ಮಾಯಾಂಕ್ ಅಗರವಾಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶುಭ್ ಮನ್ ಗಿಲ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com