ಟೀಂ ಇಂಡಿಯಾ ವಿಶ್ವ ಟಿ-20 ಚಾಂಪಿಯನ್ ಶಿಪ್ ಗೆದ್ದು 12 ವರ್ಷ: ಬಿಸಿಸಿಐ ನೆನಪು

ದಕ್ಷಿಣ ಆಫ್ರಿಕಾದ ವಾಂಡರರ್ಸ್ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಟೀಂ ಇಂಡಿಯಾ ವಿಶ್ವ-ಟಿ 20 ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 
ಧೋನಿ
ಧೋನಿ

ನವದೆಹಲಿ: ದಕ್ಷಿಣ ಆಫ್ರಿಕಾದ ವಾಂಡರರ್ಸ್ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಟೀಂ ಇಂಡಿಯಾ ವಿಶ್ವ-ಟಿ 20 ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 

2007ರ ಸೆಪ್ಟೆಂಬರ್ 24 ಅಂದರೆ ಇದೇ ದಿನದಂದು ಟೀಂ ಇಂಡಿಯಾ ಚಾರಿತ್ರಿಕ ಸಾಧನೆ ಮಾಡಿತ್ತು. ಈ ಪಂದ್ಯ ನಡೆದು 12 ವರ್ಷ ಆಗಿದ್ದರೂ ಧೋನಿ ವಿಶ್ವ ಟಿ-20 ಟ್ರೋಫಿಯನ್ನು ಎತ್ತಿ ಹಿಡಿದಿದ್ದ ಸುಂದರ ಕ್ಷಣಗಳು ದೇಶಾದ್ಯಂತ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಲ್ಲಿ ಇಂದಿಗೂ ಅಚ್ಚಳಿಯದೆ ಉಳಿದುಕೊಂಡಿದೆ.

ಫೈನಲ್ ಪಂದ್ಯದ ಸಂತೋಷದ ಕ್ಷಣಗಳಿರುವ 16 ಸೆಕೆಂಡ್ ಗಳ ವಿಡಿಯೋವೊಂದನ್ನು ಬಿಬಿಸಿಐ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇಂದು ಶೇರ್ ಮಾಡಿಕೊಂಡಿದೆ.

ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಿಸಿದ ನಂತರ ಧೋನಿ ನಾಯಕತ್ವದ ಟೀಂ ಇಂಡಿಯಾ, ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪೈಪೋಟಿ ನಡೆಸಿ ಗೆಲುವು ಸಾಧಿಸಿತ್ತು.  

ಈ ಪಂದ್ಯ ನಡೆದ 12 ವರ್ಷ ಆಗಿದ್ದರೂ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ-20 ವಿಶ್ವ ಚಾಂಪಿಯನ್ ಆಗಲು ಕಸರತ್ತು ನಡೆಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com