ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್ ತಮಿಳುನಾಡು ಕ್ರಿಕೆಟ್‌ ಸಂಸ್ಥೆಯ ಮೊದಲ 'ಅಧ್ಯಕ್ಷೆ'! 

ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ ಸಿಎ) ಯ  ಮೊದಲ ’ಅಧ್ಯಕ್ಷೆ’ಯಾಗಿ  ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ರೂಪಾ ಗುರುನಾಥ್
ರೂಪಾ ಗುರುನಾಥ್

ಚೆನ್ನೈ: ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ ಸಿಎ) ಯ  ಮೊದಲ ’ಅಧ್ಯಕ್ಷೆ’ಯಾಗಿ  ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ತಮಿಳುನಾಡು ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರೂಪಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ರೂಪಾ ಪತಿ ಗುರುನಾಥ್ ಮೇಯಪ್ಪನ್ ಅವರನ್ನು ಅಜೀವ ಪರ್ಯಂತ ನಿಷೇಧಿಸಲಾಗಿದೆ. 

ಅಧ್ಯಕ್ಷರಾಗಿ ಆಯ್ಕೆಯಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೂಪಾ ಗುರುನಾಥನ್ "ಸರ್ಕಾರದೊಂದಿಗೆ ಲೀಸ್ ಒಪ್ಪಂದವನ್ನು ಅಂತಿಮಗೊಳಿಸುವುದಾಗಿದೆ. ಟಿಎನ್ ಸಿಎ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಟಿಎನ್ ಸಿಎ ಕ್ರಮ ಕೈಗೊಳ್ಳಲಿದೆ, ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ ಸಂತಸವಾಗುತ್ತಿದೆ  ಎಂದು ರೂಪ ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com