ಕ್ರಿಕೆಟ್

ಜಡೇಜಾ ಟೀಂ ಇಂಡಿಯಾದ ಬೆಸ್ಟ್ ಫೀಲ್ಡರ್: ಆಸೀಸ್ ಕ್ರಿಕೆಟಿಗ ಬ್ರಾಡ್ ಹಾಗ್

ಜಗತ್ತಿನಾದ್ಯಂತ ಕೊರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಕ್ರೀಡಾ ಚಟುವಟಿಕೆಗಳು ಮುಂದೂಡಲ್ಪಟ್ಟಿವೆ ಅಥವಾ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಕ್ರೀಡಾಪಟುಗಳು ಸಾಮಾಜಿಕ ತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಸಹ ಇದಕ್ಕೆ ಹೊರತಾಗಿಲ್ಲ.

ಜಡೇಜಾ ಟೀಂ ಇಂಡಿಯಾದ ಬೆಸ್ಟ್ ಫೀಲ್ಡರ್: ಆಸೀಸ್ ಕ್ರಿಕೆಟಿಗ ಬ್ರಾಡ್ ಹಾಗ್
ರವೀಂದ್ರ ಜಡೇಜಾ
Published On :

ಸಿಡ್ನಿ: ಜಗತ್ತಿನಾದ್ಯಂತ ಕೊರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಕ್ರೀಡಾ ಚಟುವಟಿಕೆಗಳು ಮುಂದೂಡಲ್ಪಟ್ಟಿವೆ ಅಥವಾ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಕ್ರೀಡಾಪಟುಗಳು ಸಾಮಾಜಿಕ ತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಸಹ ಇದಕ್ಕೆ ಹೊರತಾಗಿಲ್ಲ.

ಟ್ವಿಟರ್ ನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸದಾ ಸಕ್ರಿಯರಾಗಿರುವ ಅವರಿಗೆ ಭಾರತದ ಅತ್ಯುತ್ತಮ ಫೀಲ್ಡರ್ ಯಾರೆಂದು ಹೆಸರಿಸುವಂತೆ ಅಭಿಮಾನಿಗಳು ಕೋರಿದ್ದಾರೆ. 

ಜತೆಗೆ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ನಡುವೆ ಆಯ್ಕೆ ಮಾಡುವಂತೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಾಗ್, ಈ ನಾಲ್ವರು ಅದ್ಭುತ ಆಟಗಾರರೇ ಅವರಿಗೆ ಬೌಲಿಂಗ್ ಮಾಡುವುದನ್ನು ನಾನು ಇಷ್ಟಪಡುತ್ತೇನೆ. ಆದರೆ ಜಡೇಜಾ ನನ್ನ ಫೇವರಿಟ್ ಫೀಲ್ಡರ್ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.