ಕ್ರಿಕೆಟ್

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ
ನೆಸ್ ವಾಡಿಯಾ
Published On :

ಮುಂಬೈ: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಹೇಳಿದ್ದಾರೆ.

ಐಪಿಎಲ್ ಟೈಟಲ್ ಪ್ರಾಯೋಜಕತ್ವದಿಂದ ವಿವೋ ಕಂಪನಿ ಹಿಂದಕ್ಕೆ ಸರಿಯುತ್ತಿರುವ ಬಗ್ಗೆ ಊಹಾಪೋಹಗಳು ಎದಿದ್ದು, ಇದೊಂದು ಹಾಸ್ಯಾಸ್ಪದ ಅನ್ನಿಸುತ್ತಿದೆ. ಐಪಿಎಲ್ ನಲ್ಲಿ ಭವಿಷ್ಯ ಲೆಕ್ಕಿಸದೆ ಚೀನಾ ಕಂಪನಿ ಒಂದು ವೇಳೆ ದೂರ ಸರಿದರೆ ಬೇರೆ ಕಂಪನಿಗಳ ಪ್ರಾಯೋಜಕತ್ವದ ಅಗತ್ಯವಿರುತ್ತದೆ ಎಂದರು.

ಟೈಟಲ್ ಪ್ರಾಯೋಜಕತ್ವದಲ್ಲಿ ಬಿಸಿಸಿಐ ನಿರ್ಧಾರದ ಬಗ್ಗೆ ಗೊತ್ತಿಲ್ಲ, ಬಿಸಿಸಿಐನ್ನು ಬೆಂಬಲಿಸಬೇಕಾಗಿದ್ದು,  ಶೀಘ್ರದಲ್ಲಿ ಮತ್ತೆ ಸಭೆ ನಡೆಸಲಾಗುವುದು, ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಾಯೋಜಕತ್ವ, ಅಥವಾ ತಂಡ, ಅಥವಾ ಐಪಿಎಲ್  ಬಗ್ಗೆ ಮಾತುಕತೆಯನ್ನು ನಿರೀಕ್ಷಿಸುವುದಾಗಿ ವಾಡಿಯಾ ಹೇಳಿದರು

ಐಪಿಎಲ್ ಟೂರ್ನಮೆಂಟ್  ನ್ನು ಸುಗಮವಾಗಿ ನಡೆಸಲು 16 ಪುಟಗಳ ಮಾರ್ಗಸೂಚಿಗಳನ್ನು  ಬಿಸಿಸಿಐ ತಂಡಗಳಿಗೆ ಕಳುಹಿಸಿದೆ. ಐಪಿಎಲ್ ಗಾಗಿ  ಯುಎಇಗೆ ಭೇಟಿ ನೀಡುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಆದರೆ, ಸುರಕ್ಷತೆ ಬಗ್ಗೆ ರಾಜೀ ಇಲ್ಲ, ಒಂದೇ ಒಂದು ಕೋವಿಡ್-19 ಪ್ರಕರಣ ಕಂಡುಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆಯಿದೆ.ಇಂತಹ ಘಟನೆಗಳು ನಡೆಯದಂತೆ ಗಮನಹರಿಸಬೇಕಾಗಿದೆ ಎಂದು ನೆಸ್ ವಾಡಿಯಾ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.