ಮೊದಲ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ
ಟಾಸ್ ಗೆದ್ದ ಆಸ್ಟ್ರೇಲಿಯಾ
Updated on

ಕ್ಯಾನ್ ಬೆರ್ರಾ: ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕ್ಯಾನ್ ಬೆರ್ರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಿಂದ ಭಾರತದ ಪ್ರಮುಖ ವೇಗಿ ಜಸ್ ಪ್ರೀತ್ ಬುಮ್ರಾ ರಿಗೆ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಟೆಸ್ಟ್ ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು  ಹೇಳಲಾಗಿದೆ.

ಇನ್ನು ಈ ಹಿಂದೆ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ತಂಡಗಳು:
ಆಸ್ಟ್ರೇಲಿಯಾ (ಪ್ಲೇಯಿಂಗ್ ಇಲೆವೆನ್):
ಡಿ ಆರ್ಸಿ ಶಾರ್ಟ್, ಆರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಮಿಚ್ ಸ್ವೆಪ್ಸನ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೇಜಲ್‌ವುಡ್

ಭಾರತ (ಪ್ಲೇಯಿಂಗ್ ಇಲೆವೆನ್): ಶಿಖರ್ ಧವನ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಟಿ ನಟರಾಜನ್
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com