ವೇಗಿ ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ನಮ್ಮ ಬೌಲಿಂಗ್ ದಾಳಿ ಪ್ರಬಲವಾಗಿದೆ: ಅಜಿಂಕ್ಯ ರಹಾನೆ

ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.
ಅಜಿಂಕ್ಯ ರಹಾನೆ
ಅಜಿಂಕ್ಯ ರಹಾನೆ

ಆಡಿಲೇಡ್: ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 17 ರಂದು ನಡೆಯಲಿದೆ. 

ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಇದು ಗುಲಾಬಿ ಚೆಂಡಿನೊಂದಿಗೆ ಆಡಲಾಗುತ್ತದೆ. ಈ ಪ್ರವಾಸಕ್ಕಾಗಿ, ಅನುಭವಿ ವೇಗದ ಬೌಲರ್ ಇಶಾಂತ್ ಗಾಯದಿಂದಾಗಿ ತಂಡದಲ್ಲಿ ಸ್ಥಾನ ಪಡೆದಿಲ್ಲ.

"ನನ್ನ ಪ್ರಕಾರ, ನಾವು ಬಲವಾದ ಬೌಲಿಂಗ್ ದಾಳಿಯನ್ನು ಹೊಂದಿದ್ದೇವೆ. ಆದರೆ ಹೌದು ನಾವು ಹಿರಿಯ ವೇಗದ ಬೌಲರ್ ಆಗಿರುವ ಇಶಾಂತ್ ಮಾರಕ ದಾಳಿಯನ್ನು ಖಂಡಿತವಾಗಿಯೂ ಕಳೆದುಕೊಳ್ಳುತ್ತೇವೆ ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ರಹಾನೆ ಹೇಳಿದರು.

ಐಪಿಎಲ್ ಸಮಯದಲ್ಲಿ ಪಕ್ಕೆಲುಬಿನ ಗಾಯದ ಸಮಸ್ಯೆಗೆ ಗುರಿಯಾಗಿದ್ದ ಇಶಾಂತ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ಆದಾಗ್ಯೂ, ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ವೇಗದ ದಾಳಿಯು ಆಸ್ಟ್ರೇಲಿಯನ್ನರಿಗೆ ಮಾರಕವಾಗಲಿದೆ ಎಂದು ರಹಾನೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಂಡದಲ್ಲಿರುವ ಉಮೇಶ್ ಯಾದವ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್ ಅವರೊಂದಿಗೆ ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ, ಅವರೆಲ್ಲರೂ ನಿಜವಾಗಿಯೂ ಅದ್ಭುತ ಮತ್ತು ಅನುಭವಿಗಳು. ಈ ಪರಿಸ್ಥಿತಿಗಳಲ್ಲಿ ಹೇಗೆ ಬೌಲಿಂಗ್ ಮಾಡುಬೇಕು ಎಂಬುದು ಅವರಿಗೆ ತಿಳಿದಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com