ಕ್ರಿಕೆಟ್

ವಿರಾಟ್ ಅನುಪಸ್ಥಿತಿಯು ಆಸ್ಟ್ರೇಲಿಯಾಕ್ಕೆ ಸಮಾಧಾನದ ವಿಷಯ: ಸುನಿಲ್ ಗವಾಸ್ಕರ್

ವಿರಾಟ್ ಅನುಪಸ್ಥಿತಿಯು ಆಸ್ಟ್ರೇಲಿಯಾಕ್ಕೆ ಸಮಾಧಾನದ ವಿಷಯ: ಸುನಿಲ್ ಗವಾಸ್ಕರ್
ಸುನಿಲ್ ಗವಾಸ್ಕರ್-ಕೊಹ್ಲಿ
Published On :

ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಲ್ಲದಿರುವುದು ಆಸ್ಟ್ರೇಲಿಯಾ ತಂಡಕ್ಕೆ ನೆಮ್ಮದಿ ನೀಡುತ್ತದೆ ಎಂದು ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಡಿಸೆಂಬರ್ 17 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದ ನಂತರ ವಿರಾಟ್ ಕೊಹ್ಲಿ ಪಿತೃತ್ವ ರಜೆ ಪಡೆದು ಮನೆಗೆ ಮರಳಲಿದ್ದಾರೆ.

ವಿರಾಟ್ ಆಸ್ಟ್ರೇಲಿಯಾದಲ್ಲಿ ಆಡಿದ 12 ಟೆಸ್ಟ್ ಪಂದ್ಯಗಳಲ್ಲಿ 6 ಶತಕಗಳನ್ನು ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಅವರು ಮನೆಗೆ ಮರಳುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಬಹುದು.

ವಿರಾಟ್ ಅನುಪಸ್ಥಿತಿಯಲ್ಲಿ, ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಅಂತರವಿರುತ್ತದೆ ಎಂದು ನಾನು ಒಪ್ಪುತ್ತೇನೆ. ವಿರಾಟ್ ಕೊಹ್ಲಿ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ಮಾಡಬೇಕಾಗಿಲ್ಲ ಮತ್ತು ಇದು ಅವರಿಗೆ ದೊಡ್ಡ ಸಮಾಧಾನವಾಗಲಿದೆ ಎಂದು ಗವಾಸ್ಕರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.