ಇದಕ್ಕಿಂತ ದೊಡ್ಡ ಕ್ಷಣ ಮತ್ತೊಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ: ವಿರಾಟ್ ಕೊಹ್ಲಿ

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಆ ಅಮೂಲ್ಯ ಕ್ಷಣದಲ್ಲಿ ತನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ-ಅನುಷ್ಕಾ
ವಿರಾಟ್ ಕೊಹ್ಲಿ-ಅನುಷ್ಕಾ
Updated on

ಅಡಿಲೇಡ್: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಆ ಅಮೂಲ್ಯ ಕ್ಷಣದಲ್ಲಿ ತನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಹೌದು.. ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಂಡಿರುವ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ. ಈ ಬಗ್ಗೆ ಬಿಸಿಸಿಐ ಟಿವಿಯ ವಿಶೇಷ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಕೊಹ್ಲಿ,  ಇದಕ್ಕಿಂತ ದೊಡ್ಡ ಕ್ಷಣ ಮತ್ತೊಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ. ಜೀವನದ ಅಮೂಲ್ಯ ಸಂದರ್ಭದಲ್ಲಿ ನನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದರು.

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಜೊತೆ ನಡೆಸಿದ ಸಂವಾದದಲ್ಲಿ ಪಾಲ್ಗೊಂಡಿದ್ದ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, 'ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನೀವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದ್ದು, ಯಾವುದೇ ಬೆಲೆ  ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.

ಅಂತೆಯೇ ಬಾಲ್ ಟ್ಯಾಂಪರಿಂದ್ ವಿಚಾರವಾಗಿ ಪಂದ್ಯದ ವೇಳೆ ಸ್ಮಿತ್ ವಿರುದ್ಧದ ಘೋಷಣೆ ಸಂದರ್ಭವನ್ನು ನೆನಪಿಸಿಕೊಂಡ ಕೊಹ್ಲಿ, ಆಟಗಾರರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ. ಜನರು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅದರಿಂದ ಕಲಿತುಕೊಳ್ಳುತ್ತಾರೆ. ಜೀವನದಲ್ಲಿ ಯಾವುದೂ ಶಾಶ್ವತವಲ್ಲ  ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೊನೆಯ ಮೂರು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com