ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಗಿಲ್, ಜಡೇಜಾ, ಪಂತ್, ಸಿರಾಜ್ ಗೆ ಸ್ಥಾನ

ನಾಳೆಯಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್ಮನ್ ಗಿಲ್, ರವೀಂದ್ರ ಜಡೇಜಾ, ರಿಷಭ್ ಪಂತ್, ಮೊಹಮ್ಮದ್ ಸಿರಾಜ್ ಅಂತಿಮ 11 ಆಟಗಾರರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 
ಟೀಂ ಇಂಡಿಯಾ ಆಟಗಾರ ಶುಭ್ಮನ್ ಗಿಲ್
ಟೀಂ ಇಂಡಿಯಾ ಆಟಗಾರ ಶುಭ್ಮನ್ ಗಿಲ್

ಮೇಲ್ಬರ್ನ್: ನಾಳೆಯಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್ಮನ್ ಗಿಲ್, ರವೀಂದ್ರ ಜಡೇಜಾ, ರಿಷಭ್ ಪಂತ್, ಮೊಹಮ್ಮದ್ ಸಿರಾಜ್ ಅಂತಿಮ 11 ಆಟಗಾರರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 

ಪೃಥ್ವಿ ಶಾ ಸ್ಥಾನಕ್ಕೆ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಸ್ಥಾನಕ್ಕೆ ರವೀಂದ್ರ ಜಡೇಜಾ, ವೃದ್ಧಿಮನ್ ಶಹಾ ಬದಲಿಗೆ ರಿಷಭ್ ಪಂತ್  ಮತ್ತು ಮೊಹಮ್ಮದ್ ಶಮಿ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಆಗಮಿಸಿದ್ದಾರೆ.

ಭಾರತ ತಂಡ ಇಂತಿದೆ: ಮಾಯಾಂಕ್ ಅಗರ್ ವಾಲ್, ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ) ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್) ಜಸ್ಪ್ರೀತ್ ಬೂಮ್ರಾ, ಉಮೇಶ್ ಯಾದವ್, ರವೀಂದ್ರ ಜಡೇಜಾ, ಆರ್. ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್ ಇದ್ದಾರೆ.

ಆಡಿಲೇಡ್ ಟೆಸ್ಟ್ ನ ಎರಡು ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರನಾಗಿ ಯಶಸ್ವಿಯಾಗುವಲ್ಲಿ  ಪೃಥ್ವಿ ಶಾ ವಿಫಲರಾದ ಕಾರಣ ಅವರ ಜಾಗಕ್ಕೆ ಶುಭ್ಮನ್ ಗಿಲ್ , ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆ ಮೇಲೆ ಭಾರತಕ್ಕೆ ವಾಪಸ್ ಆಗಿರುವುದರಿಂದ ಅವರ ಸ್ಥಾನಕ್ಕೆ ರವೀಂದ್ರ ಜಡೇಜಾ ಮತ್ತು ಮೊದಲ ಟೆಸ್ಟ್ ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ  ವೃದ್ಧಿಮನ್ ಶಹಾ ಬದಲಿಗೆ ರಿಷಭ್ ಪಂತ್ ಮತ್ತು ಗಾಯಗೊಂಡಿರುವ ಮೊಹಮ್ಮದ್ ಶಮಿ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. 

ಮೊದಲ ಟೆಸ್ಟ್ ನಲ್ಲಿ ಹೀನಾಯ ಸೋಲಿನ ಬಳಿಕ ಮತ್ತೆ ಪುಟಿದೇಳುವ ವಿಶ್ವಾಸದಲ್ಲಿದೆ ಟೀಂ ಇಂಡಿಯಾ ಆದಾಗ್ಯೂ ಕಳೆದ 10 ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಏಳು ಸಲ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ, ಒಟ್ಟಾರೇ 39 ಪಂದ್ಯಗಳಲ್ಲಿ 25 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಮೆಲ್ಬರ್ನ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಭಾರೀ ಸವಾಲು ನೀಡುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com