ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ ಅದ್ಭುತ ಫೀಲ್ಡಿಂಗ್ ಮಾಡಿ ಗಮನ ಸೆಳೆದ ಸಂಜು ಸ್ಯಾಮ್ಸನ್, ವಿಡಿಯೋ ವೈರಲ್!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ ಸ್ಲೀಪ್ ಮಾಡಿ ಟೀಂ ಇಂಡಿಯಾ ವಿಶ್ವದಾಖಲೆ ಬರೆದಿದೆ. ಇನ್ನು ಇದೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬೌಂಡರಿ ಗೆರೆಯಲ್ಲಿ ಅದ್ಭುತ ಫೀಲ್ಡಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 
ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್
Updated on: 

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ ಸ್ಲೀಪ್ ಮಾಡಿ ಟೀಂ ಇಂಡಿಯಾ ವಿಶ್ವದಾಖಲೆ ಬರೆದಿದೆ. ಇನ್ನು ಇದೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬೌಂಡರಿ ಗೆರೆಯಲ್ಲಿ ಅದ್ಭುತ ಫೀಲ್ಡಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 

ಸಂಜು ಸ್ಯಾಮ್ಸನ್ ಅವರಿಗೆ ತವರಿನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅವಕಾಶ ನೀಡದಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ಸಂಜುಗೆ ಅವಕಾಶ ನೀಡಲಾಗಿತ್ತು. ನಾಲ್ಕನೇ ಮತ್ತು ಐದನೇ ಟಿ20 ಪಂದ್ಯದಲ್ಲಿ ಆಡಿದ ಸಂಜು ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸಿದ್ದರು. ಆಡಿದ ಎರಡು ಪಂದ್ಯದಲ್ಲೂ ಕೇವಲ 10 ರನ್ ಬಾರಿಸಿದ್ದರು. 

ಆದರೆ ಫೀಲ್ಡಂಗ್ ನಲ್ಲಿ ಮಾತ್ರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಟೀ ಇಂಡಿಯಾದ ಬೌಲಿಂಗ್ ನ 8ನೇ ಓವರ್ ನಲ್ಲಿ ಟೇಲರ್ ಚೆಂಡನ್ನು ಸಿಕ್ಸ್ ಬಾರಿಸಿದರು. ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಸಂಜು ಬೌಂಡರಿ ಗೆರೆಯೊಳಗೆ ಡೈವ್ ಮಾಡಿ ಕ್ಯಾಚ್ ಹಿಡಿದು ಸಿಕ್ಸರ್ ತಡೆಯುವ ಮೂಲಕ ತಂಡಕ್ಕೆ 4 ರನ್ ಸೇವ್ ಮಾಡಿದರು.

ಸಂಜು ಸ್ಯಾಮ್ಸನ್ ಅವರು ಅದ್ಭುತ ಫೀಲ್ಡಿಂಗ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com