ರೋಹಿತ್ ಶರ್ಮಾ
ಕ್ರಿಕೆಟ್
ಭಾರತಕ್ಕೆ ಆಘಾತ: ಕಿವೀಸ್ ವಿರುದ್ಧದ ಏಕದಿನ, ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಔಟ್
ಗೆಲುವಿನ ಅಲೆಯಲ್ಲಿ ತೇಲಾಡುತ್ತಿದ್ದ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದ್ದು. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ.
ನವದೆಹಲಿ: ಗೆಲುವಿನ ಅಲೆಯಲ್ಲಿ ತೇಲಾಡುತ್ತಿದ್ದ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದ್ದು. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರೋಹಿತ್ ಶರ್ಮಾ ಅವರು ಕಿವೀಸ್ ಸರಣಿಗೆ ಅಲಭ್ಯವಾಗಿದ್ದಾರೆ ಎಂದು ಬಿಸಿಸಿಐನ ಉನ್ನತ ಮೂಲಗಳು ತಿಳಿಸಿವೆ.
ನ್ಯೂಜಿಲೆಂಡ್ ವಿರುದ್ದ ನಡೆದ ಅಂತಿಮ ಪಂದ್ಯದ ವೇಳೆ 41 ಎಸೆತಗಳಲ್ಲೇ 60 ರನ್ ಬಾರಿಸಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ರೋಹಿತ್ ಶರ್ಮಾ ಕಾಲಿನ ಹಿಂಭಾಗದಲ್ಲಿ ಗಾಯದ ಸಮಸ್ಯೆಗೊಳಗಾದರು. ಪರಿಣಾಮ ಭಾರತದ ಇನ್ನಿಂಗ್ಸ್ ಮಧ್ಯೆ ನಿವೃತ್ತಿ ಪಡೆದರು.
ಭಾರತ, ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬುಧವಾರದಿಂದ ಏಕದಿನ ಸರಣಿ ಆರಂಭವಾಗಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ