ಸೋಲಿನಲ್ಲೂ ಎಂಎಸ್ ಧೋನಿ, ಕಪಿಲ್ ದೇವ್ ದಾಖಲೆ ಮುರಿದ ಜಡೇಜಾ!

ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಸೋತಿದೆ. ಆದರೆ ಎರಡನೇ ಪಂದ್ಯದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಎಂಎಸ್ ಧೋನಿ ಮತ್ತು ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
Updated on: 

ಆಕ್ಲೆಂಡ್: ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಸೋತಿದೆ. ಆದರೆ ಎರಡನೇ ಪಂದ್ಯದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಎಂಎಸ್ ಧೋನಿ ಮತ್ತು ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ. 

ಆಕ್ಲೆಂಡ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 22 ರನ್ ಗಳಿಂದ ಸೋಲು ಕಂಡಿದೆ. ಆರಂಭಿಕ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಈ ಪಂದ್ಯದಲ್ಲಿ ಬೌಲರ್ ಗಳೇ ಹೆಚ್ಚು ರನ್ ಕಲೆ ಹಾಕಿದ್ದಾರೆ. ಇನ್ನು 7 ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ 73 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. 

ಈ ಮೂಲಕ 7 ಕ್ರಮಾಂಕದಲ್ಲಿ ಆಡಿದ ರವೀಂದ್ರ ಜಡೇಜಾ ಅವರು 7ನೇ ಅರ್ಧ ಶತಕ ಬಾರಿಸಿದ್ದಾರೆ. ಇನ್ನು ಎಂಎಸ್ ಧೋನಿ ಮತ್ತು ಕಪಿಲ್ ದೇವ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ತಲಾ 6 ಬಾರಿ ಫಿಫ್ಟಿ ಪ್ಲಸ್ ರನ್ ಬಾರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com