ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಐದನೇ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿ ಭಾರತ, ಚೊಚ್ಚಲ ಪ್ರಶಸ್ತಿಗಾಗಿ ಬಾಂಗ್ಲಾದೇಶ ಹೋರಾಟ

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ಇನ್ನು ಸ್ವಲ್ಪ ಹೊತ್ತಿನಲ್ಲಿ ನಡೆಯಲಿರುವ ೧೯ ವರ್ಷದೊಳಗಿನವರ ಕಿರಿಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪ್ರಶಸ್ತಿಗಾಗಿ ಅಣಿಯಾಗಲಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಪೊಚೆಪ್ ಸ್ಟ್ರೋಮ್: ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ಇನ್ನು ಸ್ವಲ್ಪ ಹೊತ್ತಿನಲ್ಲಿ ನಡೆಯಲಿರುವ ೧೯ ವರ್ಷದೊಳಗಿನವರ ಕಿರಿಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪ್ರಶಸ್ತಿಗಾಗಿ ಅಣಿಯಾಗಲಿವೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ಡ್ರಾವಿಡ್ ತರಬೇತಿ ನೀಡುತ್ತಿರುವ ಕಿರಿಯ ತಂಡ ವಿಶ್ವ ಕಪ್ ನಲ್ಲಿ ಐದನೇ ಪ್ರಶಸ್ತಿ ಗೆಲ್ಲುವ ತವಕದಲ್ಲಿದೆ. ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಬಾಂಗ್ಲಾದ ಕಿರಿಯ ಹುಲಿಗಳು ಪ್ರಶಸ್ತಿಗೆ ಮುತ್ತಿಕ್ಕುವ ರಣೋತ್ಸಾಹದಲ್ಲಿವೆ. ಭಾರತೀಯ ಕಾಲಮಾನ ಮಧ್ಯಾಹ್ನ ೧.೩೦ಕ್ಕೆ ಪಂದ್ಯ ಆರಂಭವಾಗಲಿದೆ. ಪ್ರಿಯಂ ಗರ್ಗ್ ನಾಯಕತ್ವದಲ್ಲಿರುವ ಹಾಲಿ ಚಾಂಪಿಯನ್ ಭಾರತ ತಂಡ ದಾಖಲೆಯ ಐದನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಲು ಸಜ್ಜಾಗುತ್ತಿದೆ.

ಇದೇ ಮೊದಲ ಬಾರಿಗೆ ಫೈನಲ್ ತಲುಪಿರುವ ಬಾಂಗ್ಲಾ ತಂಡವನ್ನು ಭಾರತದ ಪಡೆಯು ಎದುರಿಸಲಿದೆ. ಏಷ್ಯಾ ಖಂಡದ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ವಿಶೇಷ. 2018ರಲ್ಲಿ ಪೃಥ್ವಿ ಶಾ, ಶುಭಮನ್ ಗಿಲ್ ಅವರಿದ್ದ ತಂಡವು ಪ್ರಶಸ್ತಿ ಗೆದ್ದಿತ್ತು. ಅವರಿಬ್ಬರೂ ಸದ್ಯ ಭಾರತ ರಾಷ್ಟ್ರೀಯ ತಂಡದಲ್ಲಿದ್ದಾರೆ. ಈ ಬಾರಿ ಫೈನಲ್ ಗೆ ತಂಡವು ಲಗ್ಗೆ ಹಾಕಲು ಮುಂಬೈ ಹುಡುಗ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಮಧ್ಯಮವೇಗಿ ಕಾರ್ತಿಕ್ ತ್ಯಾಗಿ ಕಾರಣರಾಗಿದ್ದಾರೆ. ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡದ ಎದುರು ಯಶಸ್ವಿ ಶತಕ ಬಾರಿಸಿದ್ದರು. ತಂಡವು 10 ವಿಕೆಟ್‌ಗಳಿಂದ ಜಯಿಸಿತ್ತು.  2000ನೇ ಇಸವಿಯಲ್ಲಿ ಭಾರತವು ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಅಲ್ಲಿಂದ ಇಲ್ಲಿಯವರೆಗೆ ಒಟ್ಟು ನಾಲ್ಕು ಸಲ ಚಾಂಪಿಯನ್ ಆಗಿತ್ತು. ಎರಡು ಬಾರಿ ರನ್ನರ್ಸ್ ಅಪ್ ಆಗಿದೆ. ಫೈನಲ್‌ಗೆರಿರುವುದು ಇದು ಏಳನೇ ಸಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com