ಇಶಾಂತ್ ಶರ್ಮಾ ಫಿಟ್ ನೆಸ್ ಪರೀಕ್ಷೆ ಪಾಸ್: ಕಿವೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾಗೆ ಆನೆಬಲ!

ಟೀಂ ಇಂಡಿಯಾದ ಭರವಸೆಯ ವೇಗದ ಬೌಲರ್ ಇಶಾಂತ್ ಶರ್ಮಾ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ.
ಕೊಹ್ಲಿ-ಇಶಾಂತ್ ಶರ್ಮಾ
ಕೊಹ್ಲಿ-ಇಶಾಂತ್ ಶರ್ಮಾ
Updated on: 

ಬೆಂಗಳೂರು: ಟೀಂ ಇಂಡಿಯಾದ ಭರವಸೆಯ ವೇಗದ ಬೌಲರ್ ಇಶಾಂತ್ ಶರ್ಮಾ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ (ಎನ್ ಸಿಎ)ದಲ್ಲಿ ನಡೆದ ದೈಹಿಕ ಪರೀಕ್ಷೆಯಲ್ಲಿ ಇಶಾಂತ್ ಶರ್ಮಾ ಪಾಸ್ ಆಗಿದ್ದಾರೆ. 

ವೇಗಿ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಟೆಸ್ಟ್ ಸರಣಿಯ ವೇಳೆಗೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಜಿಲ್ಯಾಂಡ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಏಕದಿನ ಸರಣಿ ಸೋತಿರುವುದರಿಂದ ಈ ಸರಣಿ ಭಾರತಕ್ಕೆ ಬಹು ಮುಖ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com