ಮೊದಲ ಟೆಸ್ಟ್: ಮಳೆಯಿಂದ ಪಂದ್ಯ ಸ್ಥಗಿತ, ಮೊದಲ ದಿನದಾಟಕ್ಕೆ ಭಾರತ 122/5

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟಕ್ಕೆ ಭಾರತ 5 ವಿಕೆಟ್ ನಷ್ಟಕ್ಕೆ 122 ರನ್ ಪೇರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟಕ್ಕೆ ಭಾರತ 5 ವಿಕೆಟ್ ನಷ್ಟಕ್ಕೆ 122 ರನ್ ಪೇರಿಸಿದೆ. 

ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. 55 ಓವರ್ ಗಳಲ್ಲಿ ಕೇವಲ 122 ರನ್ ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. 

ಇನ್ನು ಪಂದ್ಯದ ನಡುವೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಧಗಿತಗೊಳಿಸಲಾಯಿತು. ಭಾರತ ಪರ ಪೃಥ್ವಿ ಶಾ 16, ಮಾಯಾಂಕ್ ಅಗರವಾಲ್ 34, ಚೇತೇಶ್ವರ ಪೂಜಾರ 11, ಕೊಹ್ಲಿ 2 ಮತ್ತು ವಿಹಾರಿ 7 ರನ್ ಗಳಿಸಿ ಔಟಾಗಿದ್ದಾರೆ. ಅಜಿಂಕ್ಯ ರಹಾನೆ ಅಜೇಯ 38 ಮತ್ತು ರಿಷಬ್ ಪಂತ್ ಅಜೇಯ 10 ರನ್ ಗಳಿಸಿದ್ದು ಎರಡನೇ ದಿನದಾಟವನ್ನು ಆರಂಭಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com