ಸೆಕ್ಯೂರಿಟಿ ಗಾರ್ಡ್ ಜೊತೆ ಹೆಜ್ಜೆ ಹಾಕಿದ ಟೀಂ ಇಂಡಿಯಾ ಆಟಗಾರ್ತಿ, ವಿಡಿಯೋ ವೈರಲ್!

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಇದೇ ವೇಳೆ ಟೀಂ ಇಂಡಿಯಾ ಆಟಗಾರ್ತಿ ಸೆಕ್ಯೂರಿಟಿ ಗಾರ್ಡ್ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗಿದೆ. 
ಜೆಮಿಯಾ ರೋಡ್ರಿಗಸ್
ಜೆಮಿಯಾ ರೋಡ್ರಿಗಸ್
Updated on

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಇದೇ ವೇಳೆ ಟೀಂ ಇಂಡಿಯಾ ಆಟಗಾರ್ತಿ ಸೆಕ್ಯೂರಿಟಿ ಗಾರ್ಡ್ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗಿದೆ. 

ಭಾರತದ ಪ್ರತಿಭಾನ್ವಿತ ಆಟಗಾರ್ತಿ ಜೆಮಿಯಾ ರೋಡ್ರಿಗಸ್ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಸೆಕ್ಯೂರಿಟಿ ಗಾರ್ಡ್ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ್ದರು. ಲವ್ ಆಜ್ ಕಲ್ 2 ಚಿತ್ರದ ಹಾಡೊಂದಕ್ಕೆ ಸೆಕ್ಯೂರಿಟಿ ಗಾರ್ಡ್ ಜೊತೆ ನರ್ತಿಸುವ ಮೂಲಕ ವಿಡಿಯೋ ಮಾಡಿದ್ದರು. 

ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು ಟೀಂ ಇಂಡಿಯಾ ಆಟಗಾರ್ತಿಯ ನೃತ್ಯಕ್ಕೆ ಅಬಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com