ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ವೇಗಿ ಇಶಾಂತ್, ಫೆಬ್ರವರಿ 29ರಂದು ತಮ್ಮ ವೃತ್ತಿ ಜೀವನದ 98ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. 2007ರಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಗೆ ಪದಾರ್ಪಣೆ ಮಾಡಿದ ಇಶಾಂತ್, ಲಯ ಬದ್ಧ ದಾಳಿ ನಡೆಸಿ ಗಮನ ಸೆಳೆದಿದ್ದಾರೆ. ಪ್ರಸಕ್ತ ರಣಜಿ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿರುವ ಇಶಾಂತ್, ನ್ಯೂಜಿಲೆಂಡ್ ಪ್ರವಾಸದಲ್ಲಿ ಆಡುವುದು ಅನುಮಾನವಾಗಿತ್ತು. ಆದರೆ ಗಾಯದಿಂದ ಗುಣಮುಖರಾದ ಬಳಿಕ ಇಶಾಂತ್, ಫಿಟ್ ನೆಸ್ ಟೆಸ್ಟ್ ಪಾಸ್ ಆಗಿ, ನ್ಯೂಜಿಲೆಂಡ್ ಗೆ ಪ್ರಯಾಣ ಬೆಳೆಸಿದರು.
ಇಶಾಂತ್ ಈ ಮೂಲಕ ಮತ್ತೊಂದು ಸಾಧನೆ ಮಾಡಲಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 300 ವಿಕೆಟ್ ಗಳನ್ನು ನಿಧಾನವಾಗಿ ಪಡೆದ ವಿಶ್ವದ ಮೊದಲ ಬೌಲರ್ ಎಂಬ ಶ್ರೇಯಕ್ಕೆ ಪಾತ್ರರಾಗಲಿದ್ದಾರೆ. ಈ ಮೊದಲು ಈ ದಾಖಲೆಯನ್ನು ನ್ಯೂಜಿಲೆಂಡ್ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಹೊಂದಿದ್ದರು. ವೆಟ್ಟೋರಿ 94 ಟೆಸ್ಟ್ ಪಂದ್ಯಗಳಲ್ಲಿ 300 ವಿಕೆಟ್ ಪೂರೈಸಿದ್ದರು.
Advertisement