ಶ್ರೇಯಸ್ ಅಯ್ಯರ್ ಸಿಡಿಸಿದ 'ರಾಕ್ಷಸ ಸಿಕ್ಸ್' ಕಂಡು ದಂಗಾದ ಕೊಹ್ಲಿ, ವಿಡಿಯೋ ವೈರಲ್!

ಪ್ರವಾಸಿ ಶ್ರೀಲಂಕಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಪಂದ್ಯದಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಶ್ರೇಯಸ್ ಅಯ್ಯರ್-ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್-ವಿರಾಟ್ ಕೊಹ್ಲಿ

ಇಂದೋರ್: ಪ್ರವಾಸಿ ಶ್ರೀಲಂಕಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಪಂದ್ಯದಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 

ಇಂದೋರ್ ನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಅವರು 101 ಮೀಟರ್ ದೂರದ ಸಿಕ್ಸ್ ಬಾರಿಸಿದ್ದು ಇದನ್ನು ಕಂಡ ವಿರಾಟ್ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಶ್ರೇಯಸ್ ಸಹ ತಮ್ಮ ಸಿಕ್ಸ್ ಕಂಡು ಅಚ್ಚರಿ ಪಟ್ಟರು. 

ಲಂಕಾದ ಬೌಲರ್ ಹಸರಂಗಾ ಬೌಲಿಂಗ್ ನಲ್ಲಿ ಶ್ರೇಯಸ್ ಅಯ್ಯರ್ ಈ ಸಿಕ್ಸ್ ಬಾರಿಸಿದ್ದರು. ಚೆಂಡು ಕ್ರೀಡಾಂಗಣ ರೂಫ್ ಗೆ ತಗುಲಿತು. ಇತ್ತೀಚಿನ ದಿನಗಳಲ್ಲಿ ಬ್ಯಾಟ್ಸ್ ಮನ್ ಸಿಡಿಸಿದ ಅತೀ ದೂರದ ಸಿಕ್ಸ್ ಇದಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com