ಕೆಎಲ್ ರಾಹುಲ್-ಶಿಖರ್ ಧವನ್ ಗಾಗಿ ತಮ್ಮ ಸ್ಥಾನ ಬಿಟ್ಟುಕೊಟ್ಟ ಕೊಹ್ಲಿ

ಟೀಂ ಇಂಡಿಯಾದ ಆರಂಭಿಕರಾದ ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವುದರಿಂದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಿಸಿಕೊಂಡಿದ್ದಾರೆ.
ಟೀಂ ಇಂಡಿಯಾ ಆಟಗಾರರು
ಟೀಂ ಇಂಡಿಯಾ ಆಟಗಾರರು
Updated on: 

ಮುಂಬೈ: ಟೀಂ ಇಂಡಿಯಾದ ಆರಂಭಿಕರಾದ ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವುದರಿಂದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಿಸಿಕೊಂಡಿದ್ದಾರೆ. 

ಜನವರಿ 14ರಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ ಆಡಲಿದೆ. ಇನ್ನು ತಂಡದಲ್ಲಿ ಕೆಎಲ್ ರಾಹುಲ್, ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಸ್ಥಾನಪಡೆದಿದ್ದಾರೆ. ಇನ್ನು ರೋಹಿತ್ ಶರ್ಮಾ ತಂಡಕ್ಕೆ ವಾಪಸ್ ಆಗಿರುವುದರಿಂದ ಆರಂಭಿಕ ಬ್ಯಾಟ್ಸ್ ಮನ್ ಸ್ಥಾನಕ್ಕೆ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ನಡುವೆ ಪೈಪೋಟಿ ಶುರುವಾಗಿತ್ತು. 

ಈ ಗೊಂದಲ ನಿವಾರಣೆಗೆ ನಾಯಕ ಕೊಹ್ಲಿ ಪರಿಹಾರವೊಂದನ್ನು ಕಂಡುಕೊಂಡಿದ್ದು ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನೇ ಬದಲಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದ ಕೊಹ್ಲಿ ಇದೀಗ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದು ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com