ಕೊಹ್ಲಿಯನ್ನು ಬಲೆಗೆ ಕೆಡವಿ ವಿಶೇಷ ದಾಖಲೆ ಬರೆದ ಸ್ಪಿನ್ನರ್ ಜಂಪಾ, ವಿಡಿಯೋ ವೈರಲ್!

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. ಇನ್ನು ಇದೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಜಂಪಾ ಅವರು ಕೊಹ್ಲಿಯನ್ನು ಔಟ್ ಮಾಡುವ ಮೂಲಕ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.
ವಿರಾಟ್ ಕೊಹ್ಲಿ-ಆಡಂ ಜಂಪಾ
ವಿರಾಟ್ ಕೊಹ್ಲಿ-ಆಡಂ ಜಂಪಾ
Updated on: 

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. ಇನ್ನು ಇದೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಜಂಪಾ ಅವರು ಕೊಹ್ಲಿಯನ್ನು ಔಟ್ ಮಾಡುವ ಮೂಲಕ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. 

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದ ಕೊಹ್ಲಿ 16 ರನ್ ಪೇರಿಸಿದ್ದಾಗ ಜಂಪಾ ಬೌಲಿಂಗ್ ನಲ್ಲಿ ಚೆಂಡನ್ನು ನೇರವಾಗಿ ಹೊಡೆಯುವ ಪ್ರಯತ್ನ ಮಾಡಿದರು. ಆದರೆ ಚೆಂಡು ನೇರವಾಗಿ ಜಂಪಾ ಕೈಸೇರಿತು. ಇದರೊಂದಿಗೆ ಜಂಪಾ ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿಯನ್ನು ನಾಲ್ಕನೇ ಬಾರಿಗೆ ಔಟ್ ಮಾಡಿ ಎಲೈಟ್ ಸ್ಪಿನ್ನರ್ ಗಳ ಪಟ್ಟಿ ಸೇರಿದರು. 

ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ಸ್ಪಿನ್ನರ್ ಪಟ್ಟಿಯಲ್ಲಿ ಜಂಪಾ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಇಂಗ್ಲೆಂಡ್ ನ ಗ್ರೇಮ್ ಸ್ವಾನ್ ಮತ್ತು ಲಂಕಾದ ಸೂರಜ್ ರಂದೀವ್ ನಾಲ್ಕು ಬಾರಿ ಕೊಹ್ಲಿಯನ್ನು ಔಟ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com