ಮಾಡು ಇಲ್ಲವೆ ಮಡಿ ಎರಡನೇ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಜೀವಂತ ಉಳಿಸಿಕೊಳ್ಳಲು ಗೆಲ್ಲಬೇಕಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್ ಗಳಿಂದ ಭರ್ಜರಿ ಗೆಲುವ ಸಾಧಿಸಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ರಾಜಕೋಟ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಜೀವಂತ ಉಳಿಸಿಕೊಳ್ಳಲು ಗೆಲ್ಲಬೇಕಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್ ಗಳಿಂದ ಭರ್ಜರಿ ಗೆಲುವ ಸಾಧಿಸಿದೆ. 

ರಾಜಕೋಟ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 1-1 ಅಂತರದಿಂದ ಸಮಬಲ ಸಾಧಿಸಿವೆ.

ಟೀಂ ಇಂಡಿಯಾ ಪರ ಬ್ಯಾಟಿಂಗ್ ನಲ್ಲಿ ರೋಹಿತ್ ಶರ್ಮಾ 42, ಶಿಖರ್ ಧವನ್ 96, ವಿರಾಟ್ ಕೊಹ್ಲಿ 78, ಕೆಎಲ್ ರಾಹುಲ್ 80 ಮತ್ತು ರವೀಂದ್ರ ಜಡೇಜಾ ಅಜೇಯ 20 ರನ್ ಬಾರಿಸಿದ್ದಾರೆ. 

ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಆ್ಯಂಡ್ರೂ ಜಂಪಾ 3 ಮತ್ತು ರಿಚರ್ಡ್ ಸನ್ 2 ವಿಕೆಟ್ ಪಡೆದಿದ್ದಾರೆ. 

ಆಸ್ಟ್ರೇಲಿಯಾ ಬ್ಯಾಟಿಂಗ್ ನಲ್ಲಿ ಆರೋನ್ ಪಿಂಚ್ 33, ಸ್ಟೀವನ್ ಸ್ಮಿತ್ 98, ಲ್ಯಾಬುಸ್ಚಾಗ್ನೆ 46 ರನ್ ಬಾರಿಸಿದ್ದಾರೆ. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ 3, ಶೈನಿ, ಜಡೇಜಾ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com