ಬೆಂಗಳೂರು: 3ನೇ ಏಕದಿನ ಪಂದ್ಯ, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ 

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ- ಭಾರತ ನಡುವಣ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದಿರುವ ಆಸ್ಟ್ರೇಲಿಯಾ , ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ
ಟಾಸ್ ಗೆದ್ದ ಆಸ್ಟ್ರೇಲಿಯಾ

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ- ಭಾರತ ನಡುವಣ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದಿರುವ ಆಸ್ಟ್ರೇಲಿಯಾ , ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ತಲಾ ಒಂದೊಂದು ಪಂದ್ಯದಲ್ಲಿ ಜಯಿಸಿ 1-1 ಸಮಬಲ ಸಾಧಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳಿಗೆ ಸರಣಿ ಗೆಲ್ಲಲು ಇಂದಿನ ಪಂದ್ಯ ಮಹತ್ವದ ಪಂದ್ಯವಾಗಿದೆ.

ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡ 10 ವಿಕೆಟ್ ಗಳಿಂದ ಭಾರತ ತಂಡವನ್ನು ಮಣಿಸಿ ಪ್ರಾಬಲ್ಯ ಸಾಧಿಸಿತ್ತು. ಮೊದಲನೇ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಲೈನ್ ಅಪ್ ಸಾಕಷ್ಟು ಬದಲಾವಣೆ ಮಾಡಿದ್ದು ಪಂದ್ಯದ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಿತ್ತು

ರಾಜ್ ಕೋಟ್ ಪಂದ್ಯದಲ್ಲಿ ಕೊಹ್ಲಿ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆಡಿದ್ದರು. ಆದರೆ. ಕೆ.ಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಕಣಕ್ಕೆ ಇಳಿದಿದ್ದರು. ರೋಹಿತ್ ಶರ್ಮಾ ಬಿಟ್ಟರೆ, ಈ ಮೂವರು ಅರ್ಧಶತಕ ಗಳಿಸಿದ್ದರು. ಕೆ.ಎಲ್ ರಾಹುಲ್ ಸ್ಫೋಟಕ 80 ರನ್ ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

 ತಂಡಗಳು ಇಂತಿವೆ:

ಭಾರತ: ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆ.ಎಲ್. ರಾಹುಲ್, ಮನೀಷ್  ಪಾಂಡೆ,  ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಅಥವಾ  ಯಜುವೇಂದ್ರ ಚಾಹಲ್,  ನವದೀಪ್ ಸೈನಿ, ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ 

ಆಸ್ಟ್ರೇಲಿಯಾ: ಆ್ಯರೋನ್ ಫಿಂಚ್ (ನಾಯಕ), ಅಲೆಕ್‌ಸ್‌ ಕ್ಯಾರಿ (ಉಪ ನಾಯಕ, ವಿ.ಕೀ), ಪ್ಯಾಟ್ ಕಮಿನ್ಸ್‌, ಅಸ್ಟನ್ ಅಗರ್, ಪೀಟರ್ ಹ್ಯಾಂಡ್ಸ್ ಕೊಂಬ್, ಜೋಶ್ ಹೇಜಲ್‌ವುಡ್, ಮಾರ್ನಸ್ ಲಾಬುಶೇನ್, ಕೇನ್ ರಿಚರ್ಡ್‌ಸನ್, ಆರ್ಸಿ ಶಾರ್ಟ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಆಸ್ಟನ್ ಟರ್ನರ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com