ವಿರಾಟ್ ಕೊಹ್ಲಿಯ ಕವರ್ ಡ್ರೈವ್ ಹೊಡೆತಕ್ಕೆ ಪ್ರೇಕ್ಷಕರು ಫಿದಾ! ವಿಡಿಯೋ 

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಕವರ್ ಡ್ರೈವ್  ಆಟದ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಕವರ್ ಡ್ರೈವ್  ಆಟದ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

23ನೇ ಓವರ್ ನಲ್ಲಿ ಸ್ಟಾರ್ಕ್ ಬೌಲಿಂಗ್ ನಲ್ಲಿ ವಿರಾಟ್ ಕೊಹ್ಲಿ ಅವರ  ಕವರ್ ಡ್ರೈವ್  ಮೂಲಕ ಸ್ಟನ್ನಿಂಗ್ ಬೌಂಡರಿ ಬಾರಿಸಿದರು. ವಿರಾಟ್ ಆಟಕ್ಕೆ ಫಿದಾ ಆದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್  ಆಗಿದೆ. 

61 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ವಿರಾಟ್ ಕೊಹ್ಲಿ  89 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ  ಬಹು ಮುಖ್ಯ ಪಾತ್ರ ವಹಿಸಿದರು.ಗೆಲುವಿಗೆ 13 ರನ್ ಗಳ ಅಗತ್ಯವಿದ್ದಾಗ ಕೊಹ್ಲಿಯನ್ನು ಜೋಶ್ ಹ್ಯಾಜಲ್ ವುಡ್  ಬೌಲ್ಡ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com