2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಭಾರತದ ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್
ಟಾಸ್ ಗೆದ್ದ ನ್ಯೂಜಿಲೆಂಡ್
Updated on: 

ಆಕ್ಲೆಂಡ್: ಭಾರತದ ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಕ್ಲೆಂಡ್ ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ತಂಡ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇಂದು 2ನೇ ಪಂದ್ಯವಾಗಿದ್ದು ಈ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವ ತವಕದಲ್ಲಿ ನ್ಯೂಜಿಲೆಂಡ್ ಇದ್ದು, 2ನೇ ಪಂದ್ಯವನ್ನೂ ಗೆದ್ದು ಸರಣಿ ಮೇಲೆ ಬಿಗಿ ಹಿಡಿತ ಸಾಧಿಸಬೇಕು ಎಂಬುದು ಟೀಂ ಇಂಡಿಯಾ ಯೋಜನೆಯಾಗಿದೆ.

ತಂಡಗಳು ಇಂತಿವೆ
ಭಾರತ:
ರೋಹಿತ್ ಶರ್ಮಾ, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬುಮ್ರಾ

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್ (ನಾಯಕ), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ರಾಸ್ ಟೇಲರ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಬ್ಲೇರ್ ಟಿಕ್ನರ್, ಟಿಮ್ ಸೌಥಿ, ಇಶ್ ಸೋಧಿ, ಹಮೀಶ್ ಬೆನೆಟ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com