ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲ್ಲಿಸಿಕೊಟ್ಟ ರೋ'ಹಿಟ್' ಶರ್ಮಾರಿಂದ ಮತ್ತೊಂದು ದಾಖಲೆ!

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದ ಸೂಪರ್ ಓವರ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸರಣಿ ಗೆಲ್ಲಿಸಿಕೊಟ್ಟ ರೋಹಿತ್ ಶರ್ಮಾ ಅವರು ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on: 

ಹಮಿಲ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದ ಸೂಪರ್ ಓವರ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸರಣಿ ಗೆಲ್ಲಿಸಿಕೊಟ್ಟ ರೋಹಿತ್ ಶರ್ಮಾ ಅವರು ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ. 

ಹಮಿಲ್ಟನ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ 65 ರನ್ ಪೇರಿಸಿದ್ದರು. ಇದರ ಜೊತೆಗೆ ಅಂತಾರಾಷ್ಟ್ರೀಯ ಮೂರು ಮಾದರಿಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ 10 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಸುನೀಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com