ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವು ಬೆನ್ನಲ್ಲೇ ಟ್ವೀಟ್ ಮಾಡಿದ ಕೊಹ್ಲಿ!

ನ್ಯೂಜಿಲ್ಯಾಂಡ್ ನೆಲದಲ್ಲಿ ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಟಿ20 ಸರಣಿ ಗೆದ್ದು ಬೀಗಿದ್ದು ಇದರ ಬೆನ್ನಲ್ಲೇ ಸರಣಿ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ವೊಂದನ್ನು ಮಾಡಿದ್ದಾರೆ.
ಕೊಹ್ಲಿ
ಕೊಹ್ಲಿ
Updated on: 

ಹಮಿಲ್ಟನ್: ನ್ಯೂಜಿಲ್ಯಾಂಡ್ ನೆಲದಲ್ಲಿ ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಟಿ20 ಸರಣಿ ಗೆದ್ದು ಬೀಗಿದ್ದು ಇದರ ಬೆನ್ನಲ್ಲೇ ಸರಣಿ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ವೊಂದನ್ನು ಮಾಡಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದೆ. ಈ ಖುಷಿಯಲ್ಲೇ ಟೀಂ ಇಂಡಿಯಾ ನಾಯಕ ಕೊಹ್ಲಿ 'ಧಟ್ಸ್ ಔ ವಿ ಡೂ ಈಟ್' ಎಂದು ಟ್ವೀಟ್ ಮಾಡಿದ್ದಾರೆ. 

ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟಿ20 ಪಂದ್ಯದ ಟೈನಲ್ಲಿ ಅಂತ್ಯವಾಗಿತ್ತು. ನಂತರ ಎರಡು ತಂಡಗಳಿಗೆ ಸೂಪರ್ ಓವರ್ ನೀಡಲಾಗಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕಿವೀಸ್ 17 ರನ್ ಬಾರಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. 

ಐದು ಪಂದ್ಯಗಳಲ್ಲಿ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಮುನ್ನಡೆ ಸಾಧಿಸಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com