ಮಹಿಳಾ ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಆಡದೇ ಫೈನಲ್ ಪ್ರವೇಶಿಸಲಿದೆ ಟೀಂ ಇಂಡಿಯಾ?

ನವದೆಹಲಿ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಮಹಿಳಾ ತಂಡ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣೆಸಲಿದೆ.
ಟೂರ್ನಿಯ ಲೀಗ್ ಹಂತದಲ್ಲಿ ಸತತ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಇದೀಗ ನಿರ್ಣಾಯಕ ಹಂತಕ್ಕೆ ಬಂದಿದ್ದಾರೆ. ನಾಳೆ ಸಿಡ್ನಿಯಲ್ಲಿ ಕ್ರಿಕೆಟ್ ಮೈದಾನದಲ್ಲಿ ಮೊಲದ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣೆಸಲಿವೆ.
ಆದರೆ ಈ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಿಡ್ನಿ ಹವಾಮಾನ ಇಲಾಖೆಯ ಸ್ಪಷ್ಟಪಡಿಸಿದೆ. ಸಿಡ್ನಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಶೇ. 70ರಷ್ಟಿದೆ ಎಂದು ಆಸ್ಟ್ರೇಲಿಯನ್ ವರದಿಯಲ್ಲಿ ವ್ಯಕ್ತವಾಗಿದೆ.
ಆದ್ದರಿಂದ ಸೆಮಿಫೈನಲ್ ಪಂದ್ಯದ ಫಲಿತಾಂಶದ ಮೇಲೆ ಮಳೆ ನಿರ್ಣಾಟಕ ಪಾತ್ರವಹಿಸುವ ಸಾಧ್ಯತೆ ಇದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ನಲ್ಲಿ ಕನಿಷ್ಠ 10 ಓವರ್ ಪಂದ್ಯ ನಡೆಯಬೇಕಿದೆ. ಇದು ಕೂಡ ನಡೆಯದಿದ್ದರೆ ಭಾರತ ತಂಡಕ್ಕೆ ಜಾಕ್ ಪಾಟ್ ಹೊಡೆಯಲಿದೆ.
ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನವಿರುವುದಿಲ್ಲ. ಹೀಗಾಗಿ ಟೂರ್ನಿಯಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಇನ್ನು ಟೂರ್ನಿಯಲ್ಲಿ ಭಾರತ 4 ಪಂದ್ಯಗಳಲ್ಲೂ ಗೆಲುವು ಸಾಧಿಸಿರುವುದರಿಂದ ಮಳೆಯಿಂದ ಪಂದ್ಯ ರದ್ದಾದರೆ ನೇರವಾಗಿ ಫೈನಲ್ ಪ್ರವೇಶಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


