
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 51 ಕೋಟಿ ನೀಡಿದ ಬೆನ್ನಲ್ಲೆ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಲಾ 50 ಲಕ್ಷ ರೂ. ಸೇರಿದಂತೆ ಒಟ್ಟು ಒಂದು ಕೋಟಿ ರೂ.ಗಳ ದೇಣಿಗೆ ನೀಡಿದೆ.
ಕೇಂದ್ರ ಸರ್ಕಾರದ ಪ್ರಾಧಾನ ಮಂತ್ರಿ ತುರ್ತು ಪರಿಸ್ಥಿತಿ ಹಾಗೂ ನಾಗರೀಕ ಸಹಾಯಕ ಪರಿಹಾರ ನಿಧಿಗೆ 50 ಲಕ್ಷ ರೂ. ಹಾಗೂ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ಗಳನ್ನು ದೇಣಿಗೆ ನೀಡಿರುವುದಾಗಿ ಕಎಸ್‌ಸಿಎ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಇತರೆ ಅಧಿಕಾರಿ ವರ್ಗ ತಿಳಿಸಿದೆ.
ಉಡುಪಿಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದ್ದು ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ.
Advertisement