ನಾಯಿಯೊಂದಿಗೆ ಆಟವಾಡುತ್ತಿರುವ ಎಂಎಸ್ ಧೋನಿ ವಿಡಿಯೋ ವೈರಲ್!

ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಲಾಕ್ ಡೌನ್ ಸಮಯದಲ್ಲಿ ನಾಯಿಯೊಂದಿಗೆ ಆಟವಾಡುತ್ತಿದ್ದು, ತಮ್ಮ ನೆಚ್ಚಿನ ನಾಯಿಗೆ ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. 
ಎಂಎಸ್ ಧೋನಿ-ಝೀವಾ
ಎಂಎಸ್ ಧೋನಿ-ಝೀವಾ
Updated on

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಲಾಕ್ ಡೌನ್ ಸಮಯದಲ್ಲಿ ನಾಯಿಯೊಂದಿಗೆ ಆಟವಾಡುತ್ತಿದ್ದು, ತಮ್ಮ ನೆಚ್ಚಿನ ನಾಯಿಗೆ ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. 

ಕೊರೊನಾ ವೈರಸ್ ದೇಶಾದ್ಯಂತ ಲಾಕ್ ಡೌನ್ ಆಗಿದೆ. ಇದರಿಂದ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಈ ಸಮಯದಲ್ಲಿ ಹೆಚ್ಚಿನ ಆಟಗಾರರು ತಮ್ಮ ಮನೆಗಳಲ್ಲಿ ಅಭ್ಯಾಸ ಅಥವಾ ಇತರ ಚಟುವಟಿಕೆಗಳತ್ತ ಗಮನ ಹರಿಸುತ್ತಾರೆ. ಕೆಲವು ಆಟಗಾರರು ಈ ದಿನಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯುತ್ತಿದ್ದಾರೆ.

ಎಂಎಸ್ ಧೋನಿ ತಮ್ಮ ಪುತ್ರಿ ಝೀವಾ ಜೊತೆ ತಮ್ಮ ಸಾಕು ನಾಯಿಗಳ ಜೊತೆ ಕಾಲ ಕಳೆದರು. ಝೀವಾ ಚೆಂಡನ್ನು ನಾಯಿಗೆ ಎಸೆಯುತ್ತಿದ್ದರು. ಈ ವೇಳೆ ಚೆಂಡನ್ನು ಕ್ಯಾಚ್ ಹಿಡಿಯುತ್ತಿದ್ದ ನಾಯಿ ಚೆಂಡನ್ನು ತಂದು ಕೊಡುತ್ತಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com