ರೋಹಿತ್ ಶರ್ಮಾ-ಅತುಲ್ ವಸನ್
ಕ್ರಿಕೆಟ್
ಕೊಹ್ಲಿಗೆ ಸಾಕು, ಟಿ20 ನಾಯಕತ್ವ ರೋಹಿತ್ ಶರ್ಮಾಗೆ ನೀಡಬೇಕು: ಅತುಲ್ ವಸನ್
ಟೀಂ ಇಂಡಿಯಾದ ನಾಯಕತ್ವವನ್ನು ಹಂಚಬೇಕು ಎಂಬ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ವಿರಾಟ್ ಕೊಹ್ಲಿ, ಭಾರತ ತಂಡವನ್ನು ಮೂರು ವಿಭಾಗಗಳಲ್ಲಿ ಮುನ್ನಡೆಸುತ್ತಿದ್ದಾರೆ. ಮಾಜಿ ವೇಗಿ ಅತುಲ್ ವಸನ್ ಈ ಬಗ್ಗೆ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ.
ಮುಂಬೈ: ಟೀಂ ಇಂಡಿಯಾದ ನಾಯಕತ್ವವನ್ನು ಹಂಚಬೇಕು ಎಂಬ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ವಿರಾಟ್ ಕೊಹ್ಲಿ, ಭಾರತ ತಂಡವನ್ನು ಮೂರು ವಿಭಾಗಗಳಲ್ಲಿ ಮುನ್ನಡೆಸುತ್ತಿದ್ದಾರೆ. ಮಾಜಿ ವೇಗಿ ಅತುಲ್ ವಸನ್ ಈ ಬಗ್ಗೆ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ.
ಟಿ-20 ಕ್ರಿಕೆಟ್ ನಲ್ಲಿ ಮುಂಬೈಕರ್ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಬೇಕು ಎಂದು ಅಭಿಪ್ರಾಯ ತಿಳಿದ್ದಾರೆ.
ವಿರಾಟ್ ಕೊಹ್ಲಿ ಗಾಯದಿಂದ ಹೊರಗುಳಿದ ಸರಣಿಯನ್ನು ರೋಹಿತ್ ಶರ್ಮಾ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿರುವ ರೋಹಿತ್ ತಂಡಕ್ಕೆ ನಾಲ್ಕು ಬಾರಿ ಚಾಂಪಿಯನ್ ಪಟ್ಟವನ್ನು ತೊಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ