ಐಪಿಎಲ್ 2020 ಫೈನಲ್: ಮುಂಬೈಗೆ 157 ರನ್ ಗಳ ಸಾಧಾರಣ ಗುರಿ ನೀಡಿದ ಡೆಲ್ಲಿ, Live Score ನೋಡಿ!

ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ದುಬೈ: ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿದೆ. 

ಮುಂಬೈ ಇಂಡಿಯನ್ಸ್ ತಂಡದ ವೇಗಿ ಬೌಲ್ಟ್ ಮಾರಣಾಂತಿಕ ಬೌಲಿಂಗ್ ದಾಳಿ ನಡೆಸಿ ಪ್ರಮುಖ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದ್ದು ಈ ಹಿನ್ನಲೆಯಲ್ಲಿ ಡೆಲ್ಲಿ ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕಲು ಸಾಧ್ಯವಾಯಿತು. 

ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರನಾಗಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಶಿಖರ್ ಧವನ್ ಕೇವಲ 15 ರನ್ ಮಾತ್ರ ಸಿಡಿಸಿದ್ದಾರೆ. ಇನ್ನು ಸ್ಫೋಟಕ ಹೊಡೆತಗಳಿಗೆ ಹೆಸರುವಾಸಿಯಾಗಿದ್ದ ಸ್ಟೋಯ್ನಿಸ್ ಶೂನ್ಯಕ್ಕೆ ಔಟಾದರು. ತಂಡದ ಪ್ರಮುಖ ಆಟಗಾರರ ವಿಫಲತೆಯ ಮಧ್ಯೆ ನಾಯಕ ಶ್ರೇಯಸ್ ಅಯ್ಯರ್ ಅಜೇಯ 65 ಮತ್ತು ರಿಷಬ್ ಪಂತ್ 56 ರನ್ ಪೇರಿಸಿದ್ದು ತಂಡ ಸ್ಫರ್ಧಾತ್ಮಕ ರನ್ ಪೇರಿಸಲು ಸಾಧ್ಯವಾಯಿತು. 

ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ನಲ್ಲಿ ಟ್ರೆಂಟ್ ಬೌಲ್ಟ್ 3, ಕಲ್ಟರ್ ನೇಲ್2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com