ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ 

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್  ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ.
ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್
ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್  ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು ಐದನೇ ಫೈನಲ್ ಪಂದ್ಯವಾಗಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಐಪಿಎಲ್ ಫೈನಲ್ ಪಂದ್ಯವಾಗಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡ ಫೀಲ್ಡಿಂಗ್ ಮಾಡಲಿದೆ.

ಮುಂಬೈ ಇಂಡಿಯನ್ಸ್ ತಂಡ ಇಂತಿದೆ:  ಕ್ವಿಂಟನ್ ಡಿ ಕಾಕ್, ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್, ಕೃಣಾಲ್ ಪಾಂಡ್ಯ, ಜಯಂತ್ ಯಾದವ್, ನಾಥನ್ ನಿಲೆ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಡೆಲ್ಲಿ ಕ್ಯಾಪಿಟಲ್ಸ್  ತಂಡ ಇಂತಿದೆ: ಮಾರ್ಕಸ್ ಸ್ಟೂಯಿನಿಸ್, ಶಿಖರ್ ಧವನ್, ಅಂಜಿಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಶಿಮ್ರಾನ್ ಹೆಟ್ಮೈಯರ್, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com