ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಗೈರಾಗುತ್ತಿರುವುದಕ್ಕೆ ಅಭಿಮಾನಿಗಳಿಂದ ಆಕ್ರೋಶ

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಂದ ಹೊರಗುಳಿಯುತ್ತಿರುವುದಕ್ಕೆ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿ ಜಾಲತಾಣದಲ್ಲಿ ಅಸಮಾಮಾದಾನ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶರ್ಮಾ-ಕೊಹ್ಲಿ
ಅನುಷ್ಕಾ ಶರ್ಮಾ-ಕೊಹ್ಲಿ
Updated on: 

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಂದ ಹೊರಗುಳಿಯುತ್ತಿರುವುದಕ್ಕೆ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿ ಜಾಲತಾಣದಲ್ಲಿ ಅಸಮಾಮಾದಾನ ವ್ಯಕ್ತಪಡಿಸಿದ್ದಾರೆ.

ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಜನವರಿಯಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಡಿ .17ರಂದು ಅಡಿಲೇಡ್‌ನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಣ ಡೇ-ನೈಟ್‌ ಡೆಸ್ಟ್‌ ಬಳಿಕ ಕೊಹ್ಲಿ ವಿರಾಮ ತೆಗೆದುಕೊಳ್ಳಲಿದ್ದು, ತಾಯ್ನಾಡಿಗೆ ಹಿಂದಿರುಗಲು ಬಿಸಿಸಿಐನಿಂದ ಅನುಮತಿ ಪಡೆದಿದ್ದಾರೆ. 

ವಿರಾಟ್‌ ಕೊಹ್ಲಿ ಮನವಿಯನ್ನು ಬಿಸಿಸಿಐ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ತವರಿಗೆ ವಾಪಸ್‌ ಆದ ಬಳಿಕ ಅಜಿಂಕ್ಯ ರಹಾನೆ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. 

ವಿರಾಟ್‌ ಕೊಹ್ಲಿ ತವರಿಗೆ ಬಂದು ಮಗುವನ್ನು ನೀಡಿದ ಬಳಿಕ ಮತ್ತೆ ಆಸ್ಟ್ರೇಲಿಯಾಗೆ ಮರಳಬಹುದಾಗಿತ್ತು. ಆದರೆ 11 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಹಾಗಾಗಿ, ಇದು ಸಾಧ್ಯವಾಗುತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com