ಐಪಿಎಲ್ ನಲ್ಲಿ 50ಕ್ಕೂ ಹೆಚ್ಚು ರನ್ ಗಳನ್ನು 50 ಬಾರಿ ಸಿಡಿಸಿ ಹೊಸ ದಾಖಲೆ ಸೃಷ್ಟಿಸಿದ ವಾರ್ನರ್

ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಅವರು ಐಪಿಎಲ್ ಇತಿಹಾಸದಲ್ಲಿ 50ಕ್ಕೂ ಹೆಚ್ಚು ರನ್ ಗಳನ್ನು 50 ಬಾರಿ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಡೇವಿಡ್ ವಾರ್ನರ್
ಡೇವಿಡ್ ವಾರ್ನರ್
Updated on

ನವದೆಹಲಿ: ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಅವರು ಐಪಿಎಲ್ ಇತಿಹಾಸದಲ್ಲಿ 50ಕ್ಕೂ ಹೆಚ್ಚು ರನ್ ಗಳನ್ನು 50 ಬಾರಿ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ವಾರ್ನರ್ 52 ರನ್ ಗಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ 50ಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದರು. ಅವರು ಪಂಜಾಬ್ ವಿರುದ್ಧ ಒಂಬತ್ತು ಬಾರಿ ಅರ್ಧಶತಕ ಬಾರಿಸಿದ್ದಾರೆ. ಇದು ಸ್ವತಃ ಒಂದು ದಾಖಲೆಯಾಗಿದೆ.

ವಾರ್ನರ್ 132 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದು, 174 ಇನ್ನಿಂಗ್ಸ್‌ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಗಳನ್ನು 42 ಬಾರಿ ಬಾರಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್ ಸುರೇಶ್ ರೈನಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 189 ಇನ್ನಿಂಗ್ಸ್‌ಗಳಲ್ಲಿ 50 ಕ್ಕೂ ಹೆಚ್ಚು ರನ್ ಗಳನ್ನು 39-39 ಬಾರಿ ಗಳಿಸಿದ್ದಾರೆ.

ಮಿಸ್ಟರ್ 360 ಡಿಗ್ರಿ ಎಂದು ಜನಪ್ರಿಯವಾಗಿರುವ ಬೆಂಗಳೂರು ತಂಡದ ಎಬಿ ಡಿವಿಲಿಯರ್ಸ್ 147 ಇನ್ನಿಂಗ್ಸ್‌ಗಳಲ್ಲಿ 38 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಅನ್ನು ಮೂರು ಬಾರಿ ಪಡೆದ ಮೊದಲ ಬ್ಯಾಟ್ಸ್‌ಮನ್ ವಾರ್ನರ್. ಋತುವಿನಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. 

ಕಳೆದ ವರ್ಷ, ವಾರ್ನರ್ 12 ಪಂದ್ಯಗಳಲ್ಲಿ 69.20 ಸರಾಸರಿ ಮತ್ತು 143.86 ಸ್ಟ್ರೈಕ್ ಹೊಂದಿದ್ದು, 692 ರನ್ ಗಳಿಸಿ ಆರೆಂಜ್ ಕ್ಯಾಪ್ ಸಾಧಿಸಿದ್ದರು. ಇದಕ್ಕೂ ಮೊದಲು 2016 ರಲ್ಲಿಯೂ ಅವರಿಗೆ ಈ ಪ್ರಶಸ್ತಿ ಲಭಿಸಿತ್ತು. ಮತ್ತು ಆ ಋತುವಿನಲ್ಲಿ ಹೈದರಾಬಾದ್ ಕೂಡ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com