ಟಿ20 ಮಾದರಿಯಲ್ಲಿ ಸಹಸ್ರ ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಶುಕ್ರವಾರ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಸಿಕ್ಸರ್ ಗಳಿಸುವ ಮೂಲಕ ಟಿ20 ಮಾದರಿಯಲ್ಲಿ ಸಾವಿರಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಕ್ರಿಸ್ ಗೇಲ್
ಕ್ರಿಸ್ ಗೇಲ್

ಅಬುಧಾಬಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಶುಕ್ರವಾರ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಸಿಕ್ಸರ್ ಗಳಿಸುವ ಮೂಲಕ ಟಿ20 ಮಾದರಿಯಲ್ಲಿ ಸಾವಿರಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ರಾಯಲ್ಸ್ ಎದುರಿನ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಗೇಲ್  409 ಪಂದ್ಯಗಳಲ್ಲಿ 993 ಸಿಕ್ಸರ್ ಸಿಡಿಸಿದ್ದರು. ಸದ್ಯ ಅವರು 410 ಪಂದ್ಯಗಳಿಂದ 1001 ಸಿಕ್ಸರ್ ಬಾರಿಸಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ 26 ತಂಡಗಳನ್ನು ಪ್ರತಿನಿಧಿಸಿರುವ 41 ವರ್ಷದ ಗೇಲ್, 410 ಪಂದ್ಯಗಳಿಂದ ಈ ಸಾಧನೆ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 263, ಜಮೈಕಾ ತಲೈವಾಸ್ ಪರ 124 ಮತ್ತು ವೆಸ್ಟ್ ಇಂಡೀಸ್ ಪರ 105 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಸದ್ಯ ಕಿಂಗ್ಸ್ ಇಲೆವೆನ್ ಪಂಜಾಬ್ ಪರ 84 ಸಿಕ್ಸರ್ ಸಿಡಿಸಿದ್ದಾರೆ.

ಮತ್ತೊಬ್ಬ ವೆಸ್ಟ್ ಇಂಡೀಸ್  ಆಟಗಾರ ಕೀರನ್ ಪೊಲಾರ್ಡ್ ಟಿ20 ಮಾದರಿಯಲ್ಲಿ 690 ಸಿಕ್ಸರ್ ಸಿಡಿಸುವ ಮೂಲಕ ದ್ವಿತೀಯ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ನ ಬ್ರೆಂಡಮ್ ಮೆಕಲ್ಲಮ್ 485 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com