ಕ್ರಿಕೆಟ್

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 16 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್
ರಾಹುಲ್ ತೆವಾತಿಯಾ
Published On :

ಶಾರ್ಜ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆದ ಐಪಿಎಲ್  2020 ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್  16 ರನ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತು. ಸಂಜು ಸ್ಯಾಮ್ಸನ್ ಹಾಗೂ ನಾಯಕ ಸ್ವೀವ್ ಸ್ಮಿತ್ ಆಕರ್ಷಕ ಅರ್ಧ ಶತಕ ಸಿಡಿಸಿದರು. ಒಂಬತ್ತು ಭರ್ಜರಿ ಸಿಕ್ಸರ್ ಸಿಡಿಸಿದ ಸ್ಯಾಮ್ಸನ್ ಕೇವಲ 32 ಎಸೆತಗಳಲ್ಲಿ 74 ರನ್ ಗಳಿಸಿದರೆ, ಸ್ಮಿತ್  69 ರನ್ ಗಳಿಸಿದರು.

ಈ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ 200 ಗಳಿಸಲಷ್ಟೇ ಸಫಲವಾಯಿತು. ಫ್ಲೆಸಿ 7 ಸಿಕ್ಸರ್ ಮತ್ತು ಒಂದು ಬೌಜಡರಿ ಸಹಿತ 72  ರನ್ ಗಳಿಸಿ ಕೊನೆಯವರೆಗೂ ನಡೆಸಿದ ಹೋರಾಟ ವ್ಯರ್ಥವಾಯಿತು.  ರಾಯಲ್ಸ್ ಪರ ರಾಹುಲ್ ತೆವಾತಿಯಾ 37 ರನ್ ನೀಡಿ 3 ವಿಕೆಟ್ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.