ಐಪಿಎಲ್ 2020: ಕೆಕೆಆರ್ ಗೆ 196 ರನ್ ಗಳ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್ 

ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಗೆಲ್ಲಲು 196 ರನ್ ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ನೀಡಿದೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on: 

ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಗೆಲ್ಲಲು 196 ರನ್ ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ನೀಡಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್  ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಎದುರಾಳಿಗೆ 196ರನ್ ಗಳ  ಟಾರ್ಗೆಟ್ ನೀಡಿತು.

ನಾಯಕ ರೋಹಿತ್ ಶರ್ಮಾ 54 ಎಸೆತಗಳಲ್ಲಿ 6 ಸಿಕ್ಸರ್ ಸೇರಿದಂತೆ 80 ರನ್ ಸಿಡಿಸಿ ತಂಡದ ಮೊತ್ತ ಹೆಚ್ಚಾಗಲು ನೆರವಾದರು.  ಸೂರ್ಯ ಕುಮಾರ್ ಯಾದವ್ 47 ರನ್ ಕಲೆಹಾಕಿದರು. 

ಕೆಕೆಆರ್ ಪರ ಬೌಲಿಂಗ್ ದಾಳಿ ನಡೆಸಿದ ವೇಗಿ ಶಿವಂ, ಮಾವಿ 32ಕ್ಕೆ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com