ಟಿ-20 ವಿಶ್ವಕಪ್ ನಡೆಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಐಸಿಸಿ

ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್‌ ಅನ್ನು ಮುಂದೂಡಬೇಕೆ ಅಥವಾ ಬೇಡ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೆಲ್ಬೋರ್ನ್: ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್‌ ಅನ್ನು ಮುಂದೂಡಬೇಕೆ ಅಥವಾ ಬೇಡ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ) ಶುಕ್ರವಾರ ಹೇಳಿದೆ.

ಟಿ-20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಿಗದಿಯಾಗಿದೆ. ಆದರೆ ಕೊವಿಡ್-19 ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಇಡೀ ವಿಶ್ವವೇ ಶ್ರಮಿಸುತ್ತಿದೆ. ಹೀಗಾಗಿ ಈ ವರ್ಷದ ನಿಗದಿಯಾಗಿದ್ದ ಹಲವು ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಮುಂದೂಡಲಾಗಿದೆ. ಟಿ-20 ವಿಶ್ವಕಪ್ ಸಹ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ವಕ್ತಾರರು, ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ನ ಪರಿಸ್ಥಿತಿಯನ್ನು ಆಧರಿಸಿ ನಮಗೆ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಟಿ-20 ವಿಶ್ವಕಪ್ ಗೆ ಇನ್ನೂ ಆರು ತಿಂಗಳ ಸಮಯ ಇದೆ. ಈ ಸಂಬಂಧ ಆಸ್ಟ್ರೇಲಿಯಾ ಸರ್ಕಾರ ಸೇರಿದಂತೆ ತನ್ನ ಪಾಲುದಾರರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

"ನಾವು ಆಸ್ಟ್ರೇಲಿಯಾ ಸರ್ಕಾರ ಸೇರಿದಂತೆ ತಜ್ಞರು ಮತ್ತು ಅಧಿಕಾರಿಗಳಿಂದ ಸಲಹೆ ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಸೂಕ್ತ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ" ಎಂದು ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com