"ಒಂದು ಯುಗದ ಅಂತ್ಯ" ಧೋನಿ ನಿವೃತ್ತಿ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯೆ 

ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ  ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್  ಗಂಗೂಲಿ,ಯುಗದ ಅಂತ್ಯ ಎಂದು ಕರೆದಿದ್ದಾರೆ.ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ  ಶನಿವಾರ ಹೇಳಿಕೆ ನೀಡಿದ್ದಾರೆ.
ಸೌರವ್ ಗಂಗೂಲಿ, ಧೋನಿ
ಸೌರವ್ ಗಂಗೂಲಿ, ಧೋನಿ

ನವದೆಹಲಿ: ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ  ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ 
ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್  ಗಂಗೂಲಿ,ಯುಗದ ಅಂತ್ಯ
ಎಂದು ಕರೆದಿದ್ದಾರೆ. ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ  ಶನಿವಾರ ಹೇಳಿಕೆ ನೀಡಿದ್ದಾರೆ.

ಧೋನಿ ದೇಶ ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ವಿಶಿಷ್ಟ ಆಟಗಾರರಾಗಿದ್ದಾರೆ. ವಿಶೇಷವಾಗಿ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಅವರ ಸಾಧನೆ ಅಪಾರ.ಆರಂಭದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಭರ್ಜರಿ  ಬ್ಯಾಟಿಂಗ್ ಮೂಲಕ ವಿಶ್ವದ ಗಮನ ಸೆಳೆದಿದ್ದು,ವಿಶ್ವದಾದ್ಯಂತ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ ಎಂದಿದ್ದಾರೆ.

ಪ್ರತಿಯೊಂದು ಒಳ್ಳೆಯ ವಿಷಯಕ್ಕೂ ಅದರ ಅಂತ್ಯವಿದೆ ಮತ್ತು ಅದು ಸಂಪೂರ್ಣವಾಗಿ ಅದ್ಭುತವಾಗಿದೆ.ದೇಶದ ವಿಕೆಟ್ ‌ಕೀಪರ್‌ಗಳಿಗೆ ಮಾನದಂಡವನ್ನು ನಿಗದಿಪಡಿಸಿದ್ದಾರೆ.ಯಾವುದೇ ವಿಷಾದವಿಲ್ಲದೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ.ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು  ಬಯಸುತ್ತೇನೆ" ಎಂದು ಗಂಗೂಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com