ಐಸಿಸಿ ರ‍್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಟಿ-20 ಮಾದರಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರು ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.
 
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಐದೂವರೆ ತಿಂಗಳುಗಳಿಂದ ಭಾರತ ತಂಡವು ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಆಡಿಲ್ಲ. ಲಾಕ್ ಡೌನ್ ತೆರವುಗೊಳಿಸಿದ ನಂತರ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ತಂಡಗಳು ಮಾತ್ರ ಅಂತರಾಷ್ಟ್ರೀಯ ಸೀಮತಿ ಓವರ್ ಗಳ ಪಂದ್ಯಗಳಲ್ಲಿ ಆಡಿವೆ. ಉಳಿದ ಯಾವುದೇ ತಂಡವೂ ಯಾವುದೇ ಪಂದ್ಯಗಳನ್ನು ಆಡಿಲ್ಲ. ಆದರೂ ವಿರಾಟ್ ಮತ್ತು ರೋಹಿತ್ ಶರ್ಮಾ ಅವರು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಟಿ-20 ಮಾದರಿಯಲ್ಲಿ ಪಾಕಿಸ್ತಾನದ ಬಾಬರ್ ಆಜಂ ಮೊದಲ ಹಾಗೂ ಆಸ್ಟ್ರೇಲಿಯಾದ ಆ್ಯರನ್ ಪಿಂಚ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನ ವಿರುದ್ಧದ ಟೆಸ್ಟ್ ನಲ್ಲಿ ದ್ವಿಶತಕ ಬಾರಿಸಿದ ಜ್ಯಾಕ್ ಕ್ರಾಲಿ ಅವರು 53 ಸ್ಥಾನಗಳ ಬಡ್ತಿ ಗಳಿಸುವ ಮೂಲಕ 28ನೇ ಸ್ಥಾನಕ್ಕೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com