ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ: ಕೊನೆಯ ಪಂದ್ಯ ಗೆದ್ದು ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡ ಟೀಂ ಇಂಡಿಯಾ!

ಆಸ್ಟ್ರೇಲಿಯಾದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳಿಂದ ಗೆದ್ದು ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ.

Published: 02nd December 2020 05:28 PM  |   Last Updated: 02nd December 2020 05:57 PM   |  A+A-


Team India

ಟೀಂ ಇಂಡಿಯಾ

Posted By : Vishwanath S
Source : Online Desk

ಕ್ಯಾನ್ ಬೆರಾ: ಆಸ್ಟ್ರೇಲಿಯಾದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳಿಂದ ಗೆದ್ದು ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. 

ಬುಧವಾರ ಇಲ್ಲಿನ ಮನುಕಾ ಓವಲ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿತ್ತು. ಭಾರತ ನೀಡಿದ 303 ರನ್ ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 289 ರನ್ ಗಳಿಗೆ ಆಲೌಟ್ ಆಗುವ ಮೂಲಕ 13 ರನ್ ಗಳಿಂದ ಭಾರತಕ್ಕೆ ಶರಣಾಗಿದೆ. 

ಆಸ್ಟ್ರೇಲಿಯಾ ಪರ ಆರೋನ್ ಪಿಂಚ್ 75, ಹೆನ್ರಿಕ್ಸ್ 22, ಗ್ರೀನ್ 21, ಕೆರ್ರಿ 38, ಮ್ಯಾಕ್ಸ್ ವೆಲ್ 59, ಅಗರ್ 28 ರನ್ ಬಾರಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಶಾರ್ದೂಲ್ ಠಾಕೂರ್ 3, ಜಸ್ ಪ್ರೀತ್ ಬುಮ್ರಾ, ನಟರಾಜನ್ ತಲಾ 2 ವಿಕೆಟ್ ಪಡೆದಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (92*), ರವೀಂದ್ರ ಜಡೇಜಾ (66*), ಕ್ಯಾಪ್ಟನ್ ವಿರಾಟ್ ಕೊಹ್ಲಿ (63) ರನ್ ಸಿಡಿಸಿ ಭಾರತ ಉತ್ತಮ ಮೊತ್ತ ಕಲೆಹಾಕಲು ನೆರವಾದರು.

ಆದರೆ ಆರಂಭಿಕರಾದ ಶಿಖರ್ ಧವನ್ ಕೇವಲ 16 ರನ್ ಗಳಿಸಿ ನಿರಾಶೆ ಮೂಡಿಸಿದ್ದರೆ ಎಸ್. ಗಿಲ್ 33, ಶ್ರೇಯಸ್ ಅಯ್ಯರ್ 19 ರನ್ ಗಳಿಸಿದ್ದರು. ಇನ್ನು ಕನ್ನಡಿಗ ಕೆ.ಎಲ್. ರಾಹುಲ್ ಸಹ ಕೇವಲ 5 ರನ್ ಕಲೆಹಾಕಿ ಪೆವಿಲಿಯನ್ ಹಾದಿ ಹಿಡಿದರು. 

ಆಸ್ಟ್ರೇಲಿಯಾ ಪರ ಆಸ್ಟನ್ ಅಗರ್ 2, ಜೋಶ್‌ ಹ್ಯಾಝೆಲ್‌ವುಡ್, ಸೀನ್ ಅಬೊಟ್ಟ್, ಮತ್ತು ಆಡಮ್ ಜಂಪಾ ತಲಾ ಒಂದು ವಿಕೆಟ್ ಪಡೆದಿದ್ದರು.

ಕಳೆದ ಎರಡು ಪಂದ್ಯಗಳಲ್ಲಿ ಭಾರತ, ಸೋಲು ಕಂಡಿದೆ. ಹಾಗಾಗಿ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಇದೀಗ ಭಾರತಕ್ಕೆ ಈ ಗೆಲುವು ಗೌರವದ ಪ್ರಶ್ನೆಯಾಗಿದೆ.

Stay up to date on all the latest ಕ್ರಿಕೆಟ್ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp