ಐಸಿಸಿ ಟಿ20 ಶ್ರೇಯಾಂಕ: ಅಗ್ರ 3ನೇ ಸ್ಥಾನದಲ್ಲಿ ಕೆಎಲ್ ರಾಹುಲ್, 8ನೇ ಸ್ಥಾನದಲ್ಲಿ ಕೊಹ್ಲಿ!

ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ತಲಾ ಒಂದು ಸ್ಥಾನ ಮೇಲಕ್ಕೇರಿದ್ದಾರೆ.

Published: 09th December 2020 08:45 PM  |   Last Updated: 09th December 2020 08:45 PM   |  A+A-


Virat Kohli-KL Rahul

ವಿರಾಟ್ ಕೊಹ್ಲಿ-ಕೆಎಲ್ ರಾಹುಲ್

Posted By : Vishwanath S
Source : ANI

ದುಬೈ: ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ತಲಾ ಒಂದು ಸ್ಥಾನ ಮೇಲಕ್ಕೇರಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕೊಹ್ಲಿ ಮತ್ತು ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದರು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ತನ್ನ 25ನೇ ಅರ್ಧಶತಕವನ್ನು ಬಾರಿಸಿದ ಕೊಹ್ಲಿ, ಅಫ್ಘಾನಿಸ್ತಾನದ ಬ್ಯಾಟ್ಸ್‌ಮನ್ ಹಜರತುಲ್ಲಾರನ್ನು ಹಿಂದಿಕ್ಕಿ ಎಂಟನೇ ಸ್ಥಾನಕ್ಕೆ ಏರಿದರು. 

ಏತನ್ಮಧ್ಯೆ, ರಾಹುಲ್ ಆಸ್ಟ್ರೇಲಿಯಾದ ನಾಯಕ ಆರನ್ ಫಿಂಚ್ ಬದಲಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ 20 ಯಲ್ಲಿ ಬಲಗೈ ಬ್ಯಾಟ್ಸ್‌ಮನ್ ಅರ್ಧಶತಕವನ್ನು ಬಾರಿಸಿದ್ದರು. ಇಂಗ್ಲೆಂಡ್‌ನ ಡೇವಿಡ್ ಮಲನ್ ಮತ್ತು ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಕ್ರಮವಾಗಿ ಪ್ರಥಮ ಮತ್ತು ಎರಡು ಸ್ಥಾನಗಳಲ್ಲಿದ್ದಾರೆ.

ಬೌಲಿಂಗ್ ಪಟ್ಟಿಯಲ್ಲಿ, ಟಿ 20 ಐ ಸರಣಿಯಲ್ಲಿ ಮೂರು ವಿಕೆಟ್ ಪಡೆದ ಆಸ್ಟ್ರೇಲಿಯಾ ಸ್ಪಿನ್ನರ್ ಆಡಮ್ ಜಂಪಾ ಅಗ್ರ ಐದನೇ ಸ್ಥಾನಕ್ಕೆ ಪ್ರವೇಶಿಸಿ ಈಗ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವೇಗದ ಮುಂಚೂಣಿಯಲ್ಲಿರುವ ಕ್ರಿಸ್ ಜೋರ್ಡಾನ್ ಮೊದಲ ಹತ್ತು ಸ್ಥಾನಗಳಿಗೆ ಪ್ರವೇಶಿಸಿದರೆ ಸ್ಪಿನ್ನರ್ ಆದಿಲ್ ರಶೀದ್ ಮೂರನೇ ಸ್ಥಾನದಲ್ಲಿದ್ದಾರೆ.


Stay up to date on all the latest ಕ್ರಿಕೆಟ್ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp