ಭಾರತ-ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್: ಪ್ರೇಕ್ಷಕರ ಸಾಮರ್ಥ್ಯ 30,000ಕ್ಕೆ ಏರಿಕೆ!

ವಿಕ್ಟೋರಿಯನ್ ಸರ್ಕಾರ ಜನಸಂದಣಿಯ ನಿರ್ಬಂಧವನ್ನು ಸಡಿಲಿಸಿದ್ದು ಇದರಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಗೆ ದಿನಕ್ಕೆ 30,000 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನ
ಮೆಲ್ಬೋರ್ನ್ ಕ್ರಿಕೆಟ್ ಮೈದಾನ

ಮೆಲ್ಬೋರ್ನ್: ವಿಕ್ಟೋರಿಯನ್ ಸರ್ಕಾರ ಜನಸಂದಣಿಯ ನಿರ್ಬಂಧವನ್ನು ಸಡಿಲಿಸಿದ್ದು ಇದರಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಗೆ ದಿನಕ್ಕೆ 30,000 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. 

ವಿಶ್ವವೇ ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದು ಇದರ ನಡುವೆ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದರು. 

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿಸೆಂಬರ್ 26ರಿಂದ 30ರವರೆಗೆ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಗೆ ಈ ಮೊದಲು ದಿನಕ್ಕೆ ಸುಮಾರು 25,000 ಪ್ರೇಕ್ಷಕರಿಗೆ ಅವಕಾಶ ನೀಡಲಾಗಿತ್ತು. 

ಆದರೆ ಈಗ ರಾಜ್ಯದಲ್ಲಿ 40 ದಿನಗಳಿಂದ ಯಾವುದೇ ಹೊಸ ಕೊರೋನಾ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ಸಾಮರ್ಥ್ಯವನ್ನು 30,000ಕ್ಕೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದು ಅಂತಹ ಸವಾಲಿನ ವರ್ಷವಾಗಿದ್ದು ಎಂಸಿಜಿಗೆ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ! #AUSvIND," ​​ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿದೆ.

ಬಹು ನಿರೀಕ್ಷಿತ ನಾಲ್ಕು ಟೆಸ್ಟ್ ಸರಣಿಯು ಡಿಸೆಂಬರ್ 17 ರಿಂದ ಅಡಿಲೇಡ್‌ನಲ್ಲಿ ಪ್ರಾರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com