ಫಿಟ್ನೆಸ್ ಪರೀಕ್ಷೆಯಲ್ಲಿ ಗೆದ್ದ ರೋಹಿತ್ ಶರ್ಮಾ, ಡಿಸೆಂಬರ್ 14ಕ್ಕೆ ಆಸ್ಟ್ರೇಲಿಯಾಗೆ ಪ್ರಯಾಣ!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಫಿಟ್ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಫಿಟ್ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.

ರೋಹಿತ್ ಶರ್ಮಾ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್‌ನೆಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವೇಳೆ ವಿಶ್ವದ ನಂಬರ್ ಒನ್ ತಂಡದ ವಿರುದ್ಧ ಮಾರ್ಕ್ಯೂ ಟೆಸ್ಟ್ ಸರಣಿ ಪ್ರಾರಂಭವಾಗುವ ಮೂರು ದಿನಗಳ ಮುನ್ನ ಅಂದರೆ ಡಿಸೆಂಬರ್ 14ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಐಪಿಎಲ್ ಸಮಯದಲ್ಲಿ ರೋಹಿತ್ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಅಲಭ್ಯರಾಗಿದ್ದರು. 

ರೋಹಿತ್ ಶರ್ಮಾ ಅವರು ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ. ಆದರೆ ಕೊನೆಯ ಎರಡು ಪಂದ್ಯಗಳಲ್ಲಿ ಆಡುವ ಸಾಧ್ಯತೆ ಇದೆ. 

"ರೋಹಿತ್ ಫಿಟ್ನೆಸ್ ಟೆಸ್ಟ್ ಅನ್ನು ಪೂರ್ಣಗೊಳಿಸಿದ್ದಾರೆ. ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಅನಾಮಧೇಯತೆಯ ಪರಿಸ್ಥಿತಿಗಳ ಬಗ್ಗೆ ಪಿಟಿಐಗೆ ತಿಳಿಸಿದ್ದಾರೆ.

ರೋಹಿತ್ ಅವರ ಫಿಟ್ನೆಸ್ ಪರೀಕ್ಷೆ ಎನ್‌ಸಿಎ ನಿರ್ದೇಶಕ ರಾಹುಲ್ ದ್ರಾವಿಡ್ ಅವರ ಮೇಲ್ವಿಚಾರಣೆಯಲ್ಲಿ ನಡೆದಿದ್ದು, ರೋಹಿತ್ ಶರ್ಮಾರ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಿದ್ದಾರೆ.

ಆಸ್ಟ್ರೇಲಿಯಾ ಸರ್ಕಾರದ ನಿಯಮಗಳ ಪ್ರಕಾರ, ಸಿಡ್ನಿ (ಜನವರಿ 7 ರಿಂದ 11) ಮತ್ತು ಬ್ರಿಸ್ಬೇನ್‌ನಲ್ಲಿ (ಜನವರಿ 15 ರಿಂದ 19) ಕೊನೆಯ ಎರಡು ಟೆಸ್ಟ್‌ಗಳಿಗೆ ಆಡುವ ಮೊದಲು ರೋಹಿತ್ ಶರ್ಮಾ ಅವರು 14 ದಿನಗಳ ಕಟ್ಟುನಿಟ್ಟಿನ ಕ್ಯಾರೆಂಟೈನ್ ಮುಗಿಸಬೇಕಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com