ಪೃಥ್ವಿ ಶಾ ಬದಲು ರಾಹುಲ್ ಆರಂಭಿಕನಾಗಲಿ: ಗವಾಸ್ಕರ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ  ಅನುಭವಿಸಿದ ಹೀನಾಯ ಸೋಲು ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗೆ ಕುಸಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. 
ಸುನಿಲ್  ಗವಾಸ್ಕರ್
ಸುನಿಲ್ ಗವಾಸ್ಕರ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ  ಅನುಭವಿಸಿದ ಹೀನಾಯ ಸೋಲು ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗೆ ಕುಸಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 

ಅದರಲ್ಲೂ ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಾ ಬಂದಿರುವ ಪೃಥ್ವಿ ಶಾ ತಂಡದಿಂದ ಹೊರಗುಳಿಯಲಿ ಎಂಬುದು ಬಲವಾಗಿ ಕೇಳಿ ಬರುತ್ತಿದೆ. ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಇದೇ ಮಾತನ್ನು ವ್ಯಕ್ತಪಡಿಸಿದ್ದಾರೆ. ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್‌ಗಾಗಿ ಸಾಕಷ್ಟು ಸಕಾರಾತ್ಮಕ ಉದ್ದೇಶದೊಂದಿಗೆ ಕಣಕ್ಕಿಳಿದು ಹೊಸತನದಿಂದ ಆರಂಭಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಭಾರತೀಯ ಕ್ರಿಕೆಟ್ ತಂಡಕ್ಕೆ ಸಲಹೆಯನ್ನು ನೀಡಿದ್ದಾರೆ. ಈ ಮೂಲಕ ಮೊದಲ ಟೆಸ್ಟ್‌ನ ಸೋಲನ್ನು ಮರೆತು ಕಣಕ್ಕಿಳಿಬೇಕು ಎಂದಿದ್ದಾರೆ ಗವಾಸ್ಕರ್.

ಭಾರತ ಉತ್ತಮ ಆರಂಭವನ್ನು ಪಡೆಯಬೇಕು. ಆ ಮೂಲಕ ನಡೆದ ತಂಡಕ್ಕೆ ಸಕಾರಾತ್ಮಕತೆಯನ್ನು ತುಂಬಬಹುದು. ಹೀಗಾಗಿ ಆರಂಬಿಕನಾಗಿ ಕೆಎಲ್ ರಾಹುಲ್ ಅವರನ್ನು ಪೃಥ್ವಿ ಶಾ ಬದಲಿಗೆ ಕಣಕ್ಕಿಳಿಸಬೇಕು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇದರ ಜೊತೆಗೆ ಶುಭ್ಮನ್ ಗಿಲ್ ನಂಬರ್ 5 ಅಥವಾ ನಂಬರ್ 6ನೇ ಬ್ಯಾಟ್ಸ್‌ಮನ್ ಆಗಿ ತಂಡಕ್ಕೆ ಸೇರಿಕೊಳ್ಳಬೇಕು. ಆತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು ತಂಡಕ್ಕೆ ಆತನಿಂದ ಕೊಡುಗೆ ದೊರೆಯಲಿದೆ ಎಂಬುದನ್ನು ಗವಾಸ್ಕರ್ ಹೇಳಿದ್ದಾರೆ. 

ಇನ್ನು ಇದೇ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಫೀಲ್ಡಿಂಗ್ ಬಗ್ಗೆಗೂ ಮಾತನಾಡಿದ್ದು,  ನಾವು ಉತ್ತಮ ರೀತಿಯಲ್ಲಿ ಫೀಲ್ಡಿಂಗ್ ಹೊಂದಿದ್ದರೆ ಬಂದ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಫಿಲ್ಡಿಂಗ್ ಚೆನ್ನಾಗಿ ಮಾಡಿದ್ದರೆ ದೊಡ್ಡ ಸಮಸ್ಯೆಗಳು ಬರಲಾರದು ಎಂದಿದ್ದಾರೆ.      

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com