ಟೀಂ ಇಂಡಿಯಾಗೆ ಹಿನ್ನಡೆ; ಗಾಯಾಳು ಮಹಮದ್ ಶಮಿಗೆ 6 ವಾರ ವಿಶ್ರಾಂತಿ; ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಅನುಮಾನ

ಆಸಿಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಅಡಿಲೇಡ್ ಓವಲ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೊಳಗಾಗಿದ್ದ  ಭಾರತ ಕ್ರಿಕೆಟ್ ತಂಡದ ಬಲಗೈ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಮೊದಲ  ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ.
ಶಮಿ
ಶಮಿ

ಮೆಲ್ಬೋರ್ನ್: ಆಸಿಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಅಡಿಲೇಡ್ ಓವಲ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೊಳಗಾಗಿದ್ದ  ಭಾರತ ಕ್ರಿಕೆಟ್ ತಂಡದ ಬಲಗೈ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಮೊದಲ  ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಗಾಯಾಳು ಶಮಿಗೆ ಆರು ವಾರಗಳ ವಿಶ್ರಾಂತಿ ಸೂಚಿಸಲಾಗಿದ್ದು, ಹೀಗಾಗಿ ಶಮಿ ಆಸಿಸ್ ಪ್ರವಾಸ ಮಾತ್ರವಲ್ಲ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿದೆ. ಮೊಹಮ್ಮದ್ ಶಮಿ ವಿಶ್ರಾಂತಿ ಹಾಗೂ ಪುನಶ್ಚೇತನವು ಆರು ವಾರ  ತೆಗೆದುಕೊಳ್ಳಲಿರುವುದರಿಂದ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಆಡುವುದು ಅನುಮಾನವೆನಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಮುಂಬರುವ 2021ರ ಫೆಬ್ರವರಿಯಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ತವರಿನಲ್ಲಿ ನಡೆಯಲಿರುವ ಈ ಮೊದಲ ಟೆಸ್ಟ್ ಪಂದ್ಯಕ್ಕೂ ಶಮಿ ಲಭ್ಯರಾಗುವ  ಸಾಧ್ಯತೆ ಕ್ಷೀಣವೆನಿಸಿದೆ. 

ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಪ್ಯಾಟ್ ಕಮಿನ್ಸ್ ದಾಳಿ ಎದುರಿಸುವಲ್ಲಿ ವಿಫಲರಾಗಿದ್ದ ಮೊಹಮ್ಮದ್ ಶಮಿ ಮುಂಗೈಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಸ್ಕ್ಯಾನ್ ವೇಳೆಯಲ್ಲಿ ಫ್ರಾಕ್ಚರ್ ಆಗಿರುವುದು ಕಂಡುಬಂದಿತ್ತು. ಹೀಗಾಗಿ ಶಮಿ ಆಸಿಸ್ ಸರಣಿಯನ್ನು ಮೊಟಕು  ಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com